ಬೆಂಗಳೂರು: ನಮ್ಮ ಮೆಟ್ರೋ ರೈಲಿನಲ್ಲಿ ದಿನದಿಂದ ದಿನಕ್ಕೆ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದೆ. ಮಂಗಳವಾರ ಒಂದೇ ದಿನ 8.26 ಲಕ್ಷ ಜನ ಸಂಚರಿಸಿದ್ದಾರೆ. ಈ ಮೂಲಕ ಹಿಂದಿನ ದಾಖಲೆಗಳನ್ನು ಮೀರಿಸಿದೆ ಎಂದು ಬಿಎಂಆರ್ಸಿಎಲ್ ತಿಳಿಸಿದೆ.
ನಮ್ಮ ಮೆಟ್ರೋದಲ್ಲಿ ಒಂದೇ ದಿನ ದಾಖಲೆಯ 8.26 ಲಕ್ಷ ಜನರ ಪ್ರಯಾಣ: BMRCL - Namma Metro - NAMMA METRO
ನಮ್ಮ ಮೆಟ್ರೋದಲ್ಲಿ ಮಂಗಳವಾರ ಒಂದೇ ದಿನ 8.26 ಲಕ್ಷ ಜನ ಪ್ರಯಾಣಿಸಿದ್ದಾರೆ ಎಂದು ಬಿ.ಎಂ.ಆರ್.ಸಿ.ಎಲ್ ಮಾಹಿತಿ ನೀಡಿದೆ.
ಬೆಂಗಳೂರು ನಮ್ಮ ಮೆಟ್ರೋ ರೈಲು ಸಂಚಾರ (ETV Bharat)
Published : Aug 7, 2024, 8:06 PM IST
ನಮ್ಮ ಮೆಟ್ರೊದಲ್ಲಿ ಮಂಗಳವಾರ 8.26,883 ಜನ ಪ್ರಯಾಣಿಸಿದ್ದಾರೆ. ಇದೊಂದು ಹೊಸ ದಾಖಲೆ. ಮೆಟ್ರೊವನ್ನು ಪ್ರಯಾಣದ ಪಾಲುದಾರರನ್ನಾಗಿ ಮಾಡಿದ್ದಕ್ಕಾಗಿ ಮತ್ತು ವಾತಾವರಣದಲ್ಲಿನ ಕಾರ್ಬನ್ ಡೈ ಆಕ್ಸೈಡ್ ಪ್ರಮಾಣ ತಗ್ಗಿಸುವ ನಿಟ್ಟಿನಲ್ಲಿ ನಮ್ಮ ಪ್ರಯತ್ನವನ್ನು ಬೆಂಬಲಿಸಿದ್ದಕ್ಕೆ ಪ್ರಯಾಣಿಕರಿಗೆ ಧನ್ಯವಾದಗಳು ಎಂದು ಬಿ.ಎಂ.ಆರ್.ಸಿ.ಎಲ್ ಹೇಳಿದೆ.
ಇದನ್ನೂ ಓದಿ:ನಮ್ಮ ಮೆಟ್ರೋ ಹಳದಿ ಮಾರ್ಗದ ಪ್ರಾಯೋಗಿಕ ಸಂಚಾರ ಆರಂಭ, ಚಾಲಕರಹಿತ ರೈಲು ಓಡಾಟ! - Namma Metro Yellow Line