ಕರ್ನಾಟಕ

karnataka

ETV Bharat / state

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣಾ ವೇಳಾಪಟ್ಟಿ ಪ್ರಕಟ - General Election Schedule - GENERAL ELECTION SCHEDULE

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣಾ ವೇಳಾಪಟ್ಟಿ ಘೋಷಿಸಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ. ಎ ದಯಾನಂದ್ ಅವರು ತಿಳಿಸಿದ್ದಾರೆ.

Election Commission
ಚುನಾವಣಾ ಆಯೋಗ

By ETV Bharat Karnataka Team

Published : Mar 26, 2024, 7:22 PM IST

ಬೆಂಗಳೂರು :ಸಾರ್ವತ್ರಿಕ ಲೋಕಸಭಾ ಚುನಾವಣೆ 2024ರ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ ಭಾರತ ಚುನಾವಣಾ ಆಯೋಗವು ಸಾರ್ವತ್ರಿಕ ಚುನಾವಣೆ ವೇಳಾಪಟ್ಟಿಯನ್ನು ಘೋಷಿಸಿದೆ ಎಂದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ. ಎ ದಯಾನಂದ್ ಅವರು ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಮಾರ್ಚ್ 28 ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗುತ್ತದೆ. ನಾಮಪತ್ರಗಳನ್ನು ಸಲ್ಲಿಸಲು ಏಪ್ರಿಲ್ 4ರ ಗುರುವಾರ ಕೊನೆಯ ದಿನವಾಗಿದೆ. ಏಪ್ರಿಲ್ 5ರ ಶುಕ್ರವಾರ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರಗಳನ್ನು ಹಿಂಪಡೆಯಲು ಏಪ್ರಿಲ್ 8ರ ಸೋಮವಾರ ಕೊನೆಯ ದಿನವಾಗಿದೆ. ಏಪ್ರಿಲ್ 26ರಂದು ಮತದಾನ ನಡೆಯಲಿದೆ. ಮತಗಳ ಎಣಿಕೆ ಕಾರ್ಯ ಜೂನ್ 4ರಂದು ನಡೆಯಲಿದೆ ಎಂದಿದ್ದಾರೆ.

ಮಾರ್ಚ್ 28 ರಂದು ಭಾರತ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಲಿದೆ. ಅಂದಿನಿಂದ ಏಪ್ರಿಲ್ 8 ರವರೆಗೆ ನಾಮಪತ್ರಗಳ ಸ್ವೀಕೃತಿ, ಪರಿಶೀಲನೆ ಹಾಗೂ ಹಿಂಪಡೆಯುವ ಪ್ರಕ್ರಿಯೆಗಳನ್ನು ಬೆಂಗಳೂರು ಚುನಾವಣಾಧಿಕಾರಿಗಳ ಕಚೇರಿ, ಉತ್ತರ ಲೋಕಸಭಾ ಕ್ಷೇತ್ರ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣ, ಬೆಂಗಳೂರು ನಗರ ಜಿಲ್ಲೆ, 1ನೇ ಮಹಡಿ, ಕಂದಾಯ ಭವನ ಹಿಂಭಾಗ, ಕೆ.ಜಿ ರಸ್ತೆ ಇಲ್ಲಿ ನಡೆಸಲಾಗುವುದು ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ :ಲೋಕಸಭೆ ಚುನಾವಣೆ ವೇಳಾಪಟ್ಟಿ ನಾಳೆ ಪ್ರಕಟ: ಕೇಂದ್ರ ಚುನಾವಣಾ ಆಯೋಗ

ABOUT THE AUTHOR

...view details