ಕರ್ನಾಟಕ

karnataka

ETV Bharat / state

ಬೆಂಗಳೂರು ಉತ್ತರ ಕ್ಷೇತ್ರ: ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಜಯಭೇರಿ - Shobha Karandlaje - SHOBHA KARANDLAJE

ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಮತ ಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಗೆಲುವು ಸಾಧಿಸಿದ್ದಾರೆ.

Shobha Karandlaje
ಶೋಭಾ ಕರಂದ್ಲಾಜೆ (ETV Bharat)

By ETV Bharat Karnataka Team

Published : Jun 4, 2024, 9:45 AM IST

Updated : Jun 4, 2024, 7:54 PM IST

ಶೋಭಾ ಕರಂದ್ಲಾಜೆ (ETV Bharat)

ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ವಿಜಯದ ನಗೆ ಬೀರಿದ್ದಾರೆ. ಕಾಂಗ್ರೆಸ್​ ಅಭ್ಯರ್ಥಿ ಎಂ.ವಿ.ರಾಜೀವ್​ ಗೌಡ ಅವರ ವಿರುದ್ಧ ಶೋಭಾ 2,59,476 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಶೋಭಾ ಕರಂದ್ಲಾಜೆ 9,86,049 ಮತಗಳನ್ನು ಪಡೆದರೆ, ರಾಜೀವ್​ ಗೌಡ ಅವರಿಗೆ 7,26,573 ಮತಗಳು ದೊರೆತಿವೆ.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ ಹಲವು ಕಾರಣಗಳಿಂದ ಈ ಬಾರಿ ಕುತೂಹಲ ಕೆರಳಿಸಿತ್ತು. ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಪಕ್ಷದ ಆಂತರಿಕ ಸಮಸ್ಯೆ, ಗೊಂದಲಗಳ ಕಾರಣದಿಂದಾಗಿ ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಈ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಇವರ ವಿರುದ್ಧ ಕಾಂಗ್ರೆಸ್​ ಅಭ್ಯರ್ಥಿಯಾಗಿ ಸ್ವಾತಂತ್ರ್ಯ ಹೋರಾಟಗಾರರ ಮನೆತನ, ಪ್ರತಿಷ್ಠಿತ ಸಂಸ್ಥೆಯಲ್ಲಿ ಅಧ್ಯಾಪಕರಾಗಿ ಕೆಲಸ ಮಾಡಿರುವ ರಾಜೀವ್ ಗೌಡ ಸ್ಪರ್ಧಿಸಿದ್ದರು.

ಬೆಂಗಳೂರು ಉತ್ತರ ಕ್ಷೇತ್ರದ ಫಲಿತಾಂಶ (ETV Bharat)

ಜಿದ್ದಾಜಿದ್ದಿನಿಂದ ಕೂಡಿದ್ದ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್ ನಾಯಕರು ತಮ್ಮ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ಮಾಡಿದ್ದರು. ಶೋಭಾ ಕರಂದ್ಲಾಜೆ ಅವರು ಪ್ರಧಾನಿ ಮೋದಿ ಗ್ಯಾರಂಟಿಯೊಂದಿಗೆ ಗಾರ್ಮೆಂಟ್ಸ್, ಕಾರ್ಖಾನೆಗಳು, ಪಾರ್ಕ್​ಗಳಿಗೆ ಭೇಟಿ ನೀಡಿ ಮತದಾರರನ್ನು ಸೆಳೆದಿದ್ದರು. ಮತ್ತೊಂದೆಡೆ, ಪಂಚ ಗ್ಯಾರಂಟಿಗಳನ್ನು ಮುಂದಿಟ್ಟುಕೊಂಡು ರಾಜೀವ್ ಗೌಡ ಮತಯಾಚಿಸಿದ್ದರು.

ರಾಜ್ಯದ ವಿವಿಧ ಭಾಗಗಳು ಮಾತ್ರವಲ್ಲದೇ ದೇಶದ ವಿವಿಧ ರಾಜ್ಯಗಳಿಂದ ಬಂದ ಜನರು ಬದುಕು ಕಟ್ಟಿಕೊಂಡಿರುವ ಪ್ರದೇಶ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ. 8 ವಿಧಾನಸಭೆ ಕ್ಷೇತ್ರಗಳನ್ನು ಒಳಗೊಂಡಿರುವ ಈ ಕ್ಷೇತ್ರಕ್ಕೆ ಏ.26 ರಂದು ಚುನಾವಣೆ ನಡೆದಿತ್ತು. ಶೇ. 54.6 ಮತದಾನ ದಾಖಲಾಗಿತ್ತು. ಈ ಕ್ಷೇತ್ರದಲ್ಲಿ ಒಟ್ಟು 32,15,261 ಮತದಾರರಿದ್ದಾರೆ.

ಬಿಜೆಪಿ ಭದ್ರಕೋಟೆ: ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರವನ್ನು ತನ್ನ ತೆಕ್ಕೆಗೆ ತೆಗೆದುಕೊಂಡ ಬಿಜೆಪಿ ಕಳೆದ ನಾಲ್ಕು ಅವಧಿಯಲ್ಲೂ ಜಯ ಸಾಧಿಸಿತ್ತು. ಸಿ.ಕೆ.ಜಾಫರ್ ಶರೀಫ್ ಅವರನ್ನು 7 ಬಾರಿ ಈ ಕ್ಷೇತ್ರದ ಮತದಾರರು ಗೆಲ್ಲಿಸಿ ಸಂಸತ್​​ಗೆ ಕಳುಹಿಸಿದ್ದರು. ಇಲ್ಲಿ ಮೊದಲ ಎರಡು ಚುನಾವಣೆ ಹೊರತುಪಡಿಸಿ ಉಳಿದ ಚುನಾವಣೆಗಳಲ್ಲಿ ಗೆದ್ದವರೆಲ್ಲಾ ಕ್ಷೇತ್ರದ ಹೊರಗಿನವರೇ ಎಂಬುದು ವಿಶೇಷ. ಈ ಹಿಂದೆ ಇದು ಕಾಂಗ್ರೆಸ್‌ನ ಭದ್ರಕೋಟೆಯಾಗಿತ್ತು. ಆದರೆ, ಈಗ ಬಿಜೆಪಿಯ ಭದ್ರಕೋಟೆಯಾಗಿದೆ. ಈ ಲೋಕಸಭಾ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರಗಳ ಪೈಕಿ 5ರಲ್ಲಿ ಬಿಜೆಪಿ, 3 ರಲ್ಲಿ ಕಾಂಗ್ರೆಸ್ ಶಾಸಕರಿದ್ದಾರೆ. ಬಿಜೆಪಿಗೆ ಒಂದು ಕ್ಷೇತ್ರದಲ್ಲಿ ಒಳಪೆಟ್ಟು ಬೀಳುವುದು ನಿಶ್ಚಿತ ಎಂದೇ ಹೇಳಲಾಗಿತ್ತು.

ಇದನ್ನೂ ಓದಿ:ಲೋಕಸಭೆ ಫಲಿತಾಂಶ: ವಿಧಾನಸಭೆ ಚುನಾವಣೆಯಲ್ಲಿ ಫೇಲಾದ ಈ 10 ರಾಜಕಾರಣಿಗಳಿಗೆ ಸಂಸತ್ ಎಲೆಕ್ಷನ್​ನಲ್ಲಿ ಪಾಸಾಗುವ ಆಸೆ! - EX MLA WINNNING EXPECTATIONS

Last Updated : Jun 4, 2024, 7:54 PM IST

ABOUT THE AUTHOR

...view details