ಬೆಂಗಳೂರು: ಕೋರಮಂಗಲದ ಪಿಜಿಯಲ್ಲಿ ಯುವತಿಯ ಕೊಲೆ ಪ್ರಕರಣದಲ್ಲಿ ಆರೋಪಿ ಬಂಧಿಸಿರುವ ಪೊಲೀಸರು 10 ದಿನಗಳ ಕಾಲ ವಶಕ್ಕೆ ಪಡೆದಿದ್ದು, ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ. ಮಧ್ಯಪ್ರದೇಶದ ಭೋಪಾಲ್ನ ಅಭಿಷೇಕ್ ಘೋಷ್ ಬಂಧಿತ ಆರೋಪಿ.
ಜುಲೈ 23ರ ರಾತ್ರಿ ಮಹಿಳಾ ಪಿಜಿಗೆ ನುಗ್ಗಿ ಚಾಕುವಿನಿಂದ ಇರಿದು ಬರ್ಬರವಾಗಿ ಬಿಹಾರದ ಕೈಮೂರ್ ಮೂಲದ ಕೃತಿ ಕುಮಾರಿ ಹತ್ಯೆ ಮಾಡಿ ಪರಾರಿಯಾಗಿದ್ದ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮೂರು ವಿಶೇಷ ತಂಡಗಳನ್ನು ರಚಿಸಿದ್ದರು. ಆರೋಪಿಯನ್ನು ಮಧ್ಯಪ್ರದೇಶದಲ್ಲಿ ಬಂಧಿಸಿ ನಗರಕ್ಕೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಿ, 10 ದಿನಗಳ ಕಾಲ ಪೊಲೀಸ್ ವಶಕ್ಕೆ ಪಡೆಯಲಾಗಿದೆ.
ಬಂಧನದ ಬಗ್ಗೆ ಮಾತನಾಡಿದ ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತೀಮಾ, ''ಕೃತಿ ಕುಮಾರಿ ಹತ್ಯೆ ಪ್ರಕರಣದಲ್ಲಿ ಪರಾರಿಯಾಗಿದ್ದ ಆರೋಪಿಯನ್ನು ಶುಕ್ರವಾರ ಮಧ್ಯಪ್ರದೇಶದ ರಾಯ್ಸನ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ. ನ್ಯಾಯಾಲಯಕ್ಕೆ ಹಾಜರುಪಡಿಸಿ, 10 ದಿನಗಳ ಕಾಲ ವಶಕ್ಕೆ ಪಡೆಯಲಾಗಿದ್ದು ವಿಚಾರಣೆ ನಡೆಸಲಾಗುತ್ತಿದೆ. ಆರೋಪಿಯು ಬಿಎಸ್ಸಿ ವ್ಯಾಸಂಗ ಮಾಡಿದ್ದರೆ, ಹತ್ಯೆಯಾದ ಕೃತಿಕುನಾರಿ ಎಂಬಿಎ ಮುಗಿಸಿ, ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಳು. ಟವರ್ ಲೊಕೇಶನ್ ಜೊತೆಗೆ ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ಆರೋಪಿಯನ್ನು ಬಂಧಿಸಲಾಗಿದೆ'' ಎಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ಬೆಂಗಳೂರು: ಪಿಜಿಯೊಳಗೆ ನುಗ್ಗಿ ಯುವತಿ ಹತ್ಯೆಗೈದಿದ್ದ ಆರೋಪಿ ಮಧ್ಯಪ್ರದೇಶದಲ್ಲಿ ಬಂಧನ - PG Murder Case