ಬೆಂಗಳೂರು:ಮೆಡಿಕಲ್ ಸೀಟು ಕೊಡಿಸುವುದಾಗಿ ಉದ್ಯಮಿಗೆ 1.57 ಕೋಟಿ ರೂ. ವಂಚಿಸಿದ್ದ ಇಬ್ಬರು ಆರೋಪಿಗಳನ್ನು ನಗರದ ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳ ಮೂಲದ ಉದ್ಯಮಿಯೊಬ್ಬರಿಗೆ ವಂಚಿಸಿದ ಆರೋಪದ ಮೇಲೆ ವಿರೂಪಾಕ್ಷಪ್ಪ ಹಾಗೂ ಮಂಜಪ್ಪ ಎಂಬವರನ್ನು ಬಂಧಿಸಲಾಗಿದೆ.
2022ರಲ್ಲಿ ತಮ್ಮ ಮಗಳಿಗೆ ಮೆಡಿಕಲ್ ಸೀಟ್ ಕೊಡಿಸಲು ಪ್ರಯತ್ನಿಸುತ್ತಿದ್ದ ಉದ್ಯಮಿಗೆ ಅವರ ಪರಿಚಯಸ್ಥನಾಗಿದ್ದ ವಿರೂಪಾಕ್ಷಪ್ಪ ಮತ್ತೋರ್ವ ಆರೋಪಿ ಮಂಜಪ್ಪ ಎಂಬಾತನನ್ನು ಪರಿಚಯಿಸಿದ್ದ. ತನಗೆ 'ಬೆಂಗಳೂರಿನ ಪ್ರತಿಷ್ಠಿತ ಮೆಡಿಕಲ್ ಕಾಲೇಜು ಆಡಳಿತ ಮಂಡಳಿಯವರು ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಮುಖ ಅಧಿಕಾರಿಗಳ ಪರಿಚಯವಿದೆ' ಎಂದಿದ್ದ ಮಂಜಪ್ಪ, ಸೀಟು ಕೊಡಿಸುವುದಾಗಿ ಭರವಸೆ ನೀಡಿ 1.57 ಕೋಟಿ ರೂ. ಕೇಳಿದ್ದ ಎಂದು ಉದ್ಯಮಿ ದೂರಿನಲ್ಲಿ ತಿಳಿಸಿದ್ದರು.