ಕರ್ನಾಟಕ

karnataka

ETV Bharat / state

ಬೆಂಗಳೂರು: ಖಾಸಗಿ ಶಾಲೆಗೆ ಬಾಂಬ್‌ ಬೆದರಿಕೆ ಇ-ಮೇಲ್ - Bomb Threat Email

ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಶಾಲೆಗೆ ಕಿಡಿಗೇಡಿಗಳು ಬಾಂಬ್ ಬೆದರಿಕೆ ಇಮೇಲ್ ಕಳುಹಿಸಿದ್ದಾರೆ.

ಬಾಂಬ್​ ಬೆದರಿಕೆ ಪ್ರಕರಣ
ಸಾಂದರ್ಭಿಕ ಚಿತ್ರ (ETV Bharat)

By ETV Bharat Karnataka Team

Published : May 14, 2024, 12:32 PM IST

ಬೆಂಗಳೂರು:ನಗರದಲ್ಲಿ ಬಾಂಬ್​ ಬೆದರಿಕೆಯ ಸರಣಿ ಮುಂದುವರೆದಿದೆ. ಎರಡು ದಿನಗಳ ಹಿಂದಷ್ಟೇ ನಗರದ ಪ್ರತಿಷ್ಟಿತ ಖಾಸಗಿ ಆಸ್ಪತ್ರೆಯಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಇಮೇಲ್ ರವಾನಿಸಿದ್ದ ಕಿಡಿಗೇಡಿಗಳು, ತಡರಾತ್ರಿ ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಶಾಲೆಯೊಂದಕ್ಕೆ ಬಾಂಬ್ ಬೆದರಿಕೆ ಸಂದೇಶ ರವಾನಿಸಿದ್ದಾರೆ.

ಕೆಂಪಾಪುರದಲ್ಲಿರುವ ಖಾಸಗಿ ಶಾಲೆಗೆ ಬೆದರಿಕೆ ಇಮೇಲ್ ಬಂದಿದೆ. ಇಂದು ಬೆಳಗ್ಗೆ 7:30ಕ್ಕೆ ಎಂದಿನಂತೆ ಶಾಲೆ ಆರಂಭವಾಗಿತ್ತು. ಶಾಲೆಯ ಅಧಿಕೃತ ಇಮೇಲ್ ಖಾತೆ ಪರಿಶೀಲಿಸಿದಾಗ ಮಧ್ಯರಾತ್ರಿ 12.20ರ ಸುಮಾರಿಗೆ ಬಾಂಬ್ ಬೆದರಿಕೆ ಇಮೇಲ್ ಕಳುಹಿಸಿರುವುದು ಗೊತ್ತಾಗಿದೆ.

ಹುಸಿ ಬಾಂಬ್ ಬೆದರಿಕೆ: ಶಾಲೆಯ ಆಡಳಿತ ಮಂಡಳಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದೆ. ಘಟನಾ ಸ್ಥಳಕ್ಕೆ ಶ್ವಾನದಳ, ಬಾಂಬ್ ನಿಷ್ಕ್ರಿಯದಳದೊಂದಿಗೆ ಆಗಮಿಸಿದ ಅಮೃತಹಳ್ಳಿ ಪೊಲೀಸರು ಪರಿಶೀಲನೆ ನಡೆಸಿದರು. ಬಳಿಕ ಇದೊಂದು ಹುಸಿ ಬಾಂಬ್ ಬೆದರಿಕೆ ಎಂದು ಖಾತ್ರಿಪಡಿಸಿದರು.

ಇದನ್ನೂ ಓದಿ:ಬೆಂಗಳೂರು: ಪ್ರತಿಷ್ಠಿತ ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆಯ ಇ-ಮೇಲ್, ಪೊಲೀಸರಿಂದ ತಪಾಸಣೆ - bomb threat

ABOUT THE AUTHOR

...view details