ಆನೇಕಲ್ (ಬೆಂಗಳೂರು):ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಕೆರೆಗೆ ಹಾರಿ ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕು ಜಿಗಣಿ ಪ್ರದೇಶದಲ್ಲಿ ನಡೆದಿದೆ. ಬಿಹಾರ ಮೂಲದ ಅಮೃತೇಶ್ ಪಾಂಡೆ(21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.
ಹೇಮಲತಾ ಪಾಂಡೆ-ವಿಜಯ್ ಶಂಕರ್ ದಂಪತಿ ಹಾಗೂ ಪುತ್ರ ಅಮೃತೇಶ್ ಸಹಿತ ಕೆಲ ವರ್ಷಗಳ ಹಿಂದೆ ಜಿಗಣಿಗೆ ಬಂದು ನೆಲೆಸಿದ್ದರು. ಮಗನನ್ನು ಮೈಸೂರು ರಸ್ತೆಯ ಆರ್.ವಿ ಕಾಲೇಜಿಗೆ ಸೇರಿಸಿದ್ದರು. ಅದರಂತೆ 3ನೇ ವರ್ಷದ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಅಮೃತೇಶ್ ಹಾಸ್ಟೆಲ್ನಿಂದ ಕಾಲೇಜಿಗೆ ಹೋಗಿ ಬರುತ್ತಿದ್ದ. ಕಾಲೇಜಿಗೆ ಆಗಾಗ್ಗೆ ಗೈರು ಹಾಜರಾಗಿ ಎರಡು ವಿಷಯದಲ್ಲಿ ಅನುತ್ತೀರ್ಣನಾಗಿದ್ದ.
ಲೋಕಸಭಾ ಚುನಾವಣೆಗೆ ಮತ ಹಾಕಲು ಜಿಗಣಿಗೆ ಬಂದಿದ್ದ ಅಮೃತೇಶ್, ಕಾಲೇಜಿನವರು ಅಪ್ಪನಿಗೆ ಫೋನ್ ಮಾಡ್ತಾರೆ ಅಂತ ತಂದೆ ಫೋನ್ನಲ್ಲಿದ್ದ ನಂಬರ್ಗಳನ್ನು ಬ್ಲಾಕ್ ಮಾಡಿದ್ದನು. ಈ ವೇಳೆ ಆರನೇ ಸೆಮಿಸ್ಟರ್ಗೆ ಆಡ್ಮಿಷನ್ ಮಾಡಿ ಕಾಲೇಜಿಗೆ ಬಿಟ್ಟು ಬರ್ತೀನಿ ಎಂದು ಅಮೃತೇಶ್ಗೆ ತಂದೆ ಹೇಳಿದ್ದರು. ತಂದೆ ನನ್ನ ಜೊತೆ ಕಾಲೇಜಿಗೆ ಬಂದ್ರೆ ಫೇಲ್ ಆದ ವಿಚಾರ ತಿಳಿಯುತ್ತೆ ಅಂತ ಹೆದರಿ ಮೇ 10ರಂದು ಮನೆಯಿಂದ ಹೊರಟ ಅಮೃತೇಶ್ ಜಿಗಣಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮಗನ ನಾಪತ್ತೆ ಬಳಿಕ ಪೋಷಕರು ಎಲ್ಲೆಡೆ ಹುಡುಕಾಟ ನಡೆಸಿದ್ದು ಜಿಗಣಿ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದೆ. ಮೃತದೇಹ ತೇಲುವುದನ್ನು ಕಂಡ ಸ್ಥಳೀಯರು ಕೂಡಲೇ ಜಿಗಣಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸದ್ಯ ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂಓದಿ:ತುಮಕೂರಿನಲ್ಲಿ ಭೀಕರ ಕಾರು ಅಪಘಾತ: ಇಬ್ಬರು ಮುಖ್ಯ ಶಿಕ್ಷಕರು ಸಾವು, ಮತ್ತಿಬ್ಬರು ಗಂಭೀರ - Tumakuru Car Accident