ಕರ್ನಾಟಕ

karnataka

ETV Bharat / state

ಬೆಂಗಳೂರು: ಮನೆಯ ಬಾತ್ ರೂಮ್​ನಲ್ಲಿ ಯುವತಿ ಶವ ಪತ್ತೆ, ಹತ್ಯೆ ಪ್ರಕರಣ ದಾಖಲು - Bengaluru Girl Murder Case - BENGALURU GIRL MURDER CASE

ಮನೆಯ ಬಾತ್​ ರೂಮ್​ನಲ್ಲಿ ಯುವತಿ ಶವವಾಗಿ ಪತ್ತೆಯಾದ ಸಂಬಂಧ ಪೊಲೀಸರು ಹತ್ಯೆ ದೂರು ದಾಖಲಿಸಿಕೊಂಡಿದ್ದಾರೆ.

ಯುವತಿ ಪ್ರಬುದ್ಧಾ
ಯುವತಿ ಪ್ರಬುದ್ಧಾ (ETV Bharat)

By ETV Bharat Karnataka Team

Published : May 21, 2024, 7:42 PM IST

ಬೆಂಗಳೂರು:ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಯುವತಿಯ ಅನುಮಾನಾಸ್ಪದ ಸಾವಿನ ಕುರಿತು ತನಿಖೆ ನಡೆಸುತ್ತಿರುವ ಪೊಲೀಸರು ಹತ್ಯೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಗಳ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ ತಾಯಿ ಸೌಮ್ಯ.ಕೆ.ಆರ್ ದೂರು ನೀಡಿದ್ದು, ಅದರನ್ವಯ ಹತ್ಯೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಪ್ರಬುದ್ಧಾ (19) ಕತ್ತು ಹಾಗೂ ಕೈ ಕೊಯ್ದುಕೊಂಡ ಸ್ಥಿತಿಯಲ್ಲಿ ಮನೆಯ ಬಾತ್ ರೂಮಿನಲ್ಲಿ ಶವವಾಗಿ ಪತ್ತೆಯಾಗಿದ್ದರು. ಮೇ 15ರಂದು ಸುಬ್ರಹ್ಮಣ್ಯಪುರ ಠಾಣಾ ವ್ಯಾಪ್ತಿಯ ಬೃಂದಾವನ ಲೇಔಟ್​​ನಲ್ಲಿರುವ ಮನೆಯಲ್ಲಿ ಘಟನೆ ನಡೆದಿತ್ತು. ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದ ಪೊಲೀಸರು, ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದರು.

ಇದನ್ನೂ ಓದಿ:ಕೌಟುಂಬಿಕ ಕಲಹ: ಪೋಷಕ ನಟಿ ಕೊಲೆ, ಪರಾರಿಯಾಗಿರುವ ಪತಿಗಾಗಿ ಪೊಲೀಸರ ಶೋಧ - husband killed his wife

ಮಗಳು ಆತ್ಮಹತ್ಯೆ ಮಾಡಿಕೊಳ್ಳುವಂಥವಳಲ್ಲ, ಆಕೆಯನ್ನ ಯಾರೋ ಕ್ರೂರವಾಗಿ ಹತ್ಯೆ ಮಾಡಿದ್ದಾರೆ ಎಂದು ಯುವತಿಯ ತಾಯಿ ಸೌಮ್ಯ ಆರೋಪಿಸಿ, ಸೂಕ್ತ ತನಿಖೆ ನಡೆಸುವಂತೆ ದೂರು ನೀಡಿದ್ದರು. ಆ ದೂರಿನ ಅನ್ವಯ ಹತ್ಯೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ:ಚಾಮರಾಜನಗರ: 2.5 ತಾಸು ಆಪರೇಷನ್ ಬಳಿಕ ಗರ್ಭಕೋಶದಲ್ಲಿದ್ದ 4.5 ಕೆಜಿ ಗೆಡ್ಡೆ ಹೊರತೆಗೆದ ವೈದ್ಯ! - doctor remove tumor from woman

ABOUT THE AUTHOR

...view details