ಬೆಂಗಳೂರು:ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ. ಪ್ರಾಥಮಿಕ ಶಾಲೆಯ ವಿಭಾಗದಲ್ಲಿ 20 ಶಿಕ್ಷಕರು ಹಾಗೂ ಪ್ರೌಢ ಶಾಲಾ ವಿಭಾಗದಲ್ಲಿ 11 ಶಿಕ್ಷಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಶಿಕ್ಷಕರ ದಿನಾಚರಣೆ ದಿನದಂದು ಸರ್ಕಾರ ಪ್ರಶಸ್ತಿ ಪ್ರದಾನ ಮಾಡಲಿದೆ.
ಪ್ರಾಥಮಿಕ ಶಾಲಾ ಶಿಕ್ಷಕರು (ETV Bharat) ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಶಿಕ್ಷಣ ಇಲಾಖೆ ಉತ್ತಮ ಶಿಕ್ಷಕರ ಪ್ರಶಸ್ತಿ ಜೊತೆಗೆ ರಾಜ್ಯಮಟ್ಟದ ಪ್ರಶಸ್ತಿಗೆ ಆಯ್ಕೆಯಾದ ಮಹಿಳಾ ಶಿಕ್ಷಕಿಯರಿಗೆ ಅಂದೇ ಸಾವಿತ್ರಿಬಾಯಿ ಪುಲೆ ಪ್ರಶಸ್ತಿಯನ್ನು ಕೂಡ ನೀಡಲಾಗುತ್ತದೆ ಎಂದು ತಿಳಿಸಿದೆ.
ಪ್ರಾಥಮಿಕ ಶಾಲಾ ಶಿಕ್ಷಕರು(ETV Bharat) ಪ್ರಾಥಮಿಕ ಶಾಲಾ ಶಿಕ್ಷಕರು(ETV Bharat) ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರು, ಮುಖ್ಯಶಿಕ್ಷಕರು, ವಿಶೇಷ ಶಿಕ್ಷಕರಿಗೆ ಸರ್ಕಾರದ ಆದೇಶ ಸಂಖ್ಯೆ ಇಪಿ 308 ಪಿಬಿಎಸ್ 2021, 12.9.2022 ರ ಅನುಸಾರ ತಲಾ 25,000 ರೂ.ನಂತೆ ಒಟ್ಟು 7,75,000 ರೂ. ಗಳ ನಗದು ಪುರಸ್ಕಾರ ನೀಡಲು ಹಾಗೂ ಸದರಿ ವೆಚ್ಚವನ್ನು ರಾಜ್ಯ ಶಿಕ್ಷಣ ಕಲ್ಯಾಣ ನಿಧಿ ಮತ್ತು ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ, ಬೆಂಗಳೂರು ಇಲ್ಲಿಂದ ಭರಿಸಲು ಅನುಮತಿ ನೀಡಿ ಸರ್ಕಾರ ಆದೇಶಿಸಿದೆ.
ಪ್ರೌಢಶಾಲಾ ಶಿಕ್ಷಕರು (ETV Bharat) ಇದನ್ನೂ ಓದಿ:ಯೂಟ್ಯೂಬ್ ಮೂಲಕ ತಾಂತ್ರಿಕ ಶಿಕ್ಷಣ ಬೋಧನೆ: ಮೈಸೂರು ಐಟಿಐ ತರಬೇತಿ ಅಧಿಕಾರಿಗೆ ಒಲಿದ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ - National Teacher Award