ಬೆಂಗಳೂರು: ಹಾಸನ ಪೆನ್‌ಡ್ರೈವ್ ವಿಡಿಯೋ ಸಂತಸ್ತೆಯ ಅಪಹರಣ ಪ್ರಕರಣದಲ್ಲಿನಿರೀಕ್ಷಣಾ ಜಾಮೀನು ಪಡೆದ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಇಂದು ಎಸ್ಐಟಿ ವಿಚಾರಣೆಗೆ ಹಾಜರಾದರು. ಮಧ್ಯಾಹ್ನ 1 ಗಂಟೆಗೆ ಅವರು ವಿಚಾರಣೆಗೆ ಆಗಮಿಸಿದ್ದರು.
ಕೆ.ಆರ್.ನಗರ ಮಹಿಳೆಯ ಅಪಹರಣ ಪ್ರಕರಣದಲ್ಲಿ ಸಂತ್ರಸ್ತೆ ನೀಡಿದ ಹೇಳಿಕೆಯ ಆಧಾರದಲ್ಲಿ ಭವಾನಿ ಅವರನ್ನು ಅಧಿಕಾರಿಗಳು ಸತತ ಐದು ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ. ಸಂಜೆ 5 ರವರೆಗೂ ವಿಚಾರಣೆ ನಡೆಸುವಂತೆ ನ್ಯಾಯಾಲಯ ನಿರ್ದೇಶನ ನೀಡಿರುವ ಹಿನ್ನೆಲೆಯಲ್ಲಿ ವಿಚಾರಣೆ ನಡೆದಿದೆ. ಅಗತ್ಯವಿದ್ದಾಗ ಮತ್ತೆ ವಿಚಾರಮೆಗೆ ಬರಬೇಕೆಂದು ಇದೇ ವೇಳೆ ಅಧಿಕಾರಿಗಳು ಸೂಚಿಸಿದ್ದಾರೆ.