ಕರ್ನಾಟಕ

karnataka

ETV Bharat / state

ಗೂಡ್ಸ್ ವಾಹನಕ್ಕೆ ಬೈಕ್ ಡಿಕ್ಕಿ, ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್ ಸಾವು - BIKE ACCIDENT

ಗೂಡ್ಸ್ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ಸಶಸ್ತ್ರ ಮೀಸಲು ಪಡೆಯ ಕಾನ್ಸ್‌ಟೇಬಲ್ ಮೃತಪಟ್ಟಿದ್ದಾರೆ.

ಗೂಡ್ಸ್ ವಾಹನ
ಗೂಡ್ಸ್ ವಾಹನ (ETV Bharat)

By ETV Bharat Karnataka Team

Published : Nov 13, 2024, 1:27 PM IST

ಬೆಂಗಳೂರು:ಗೂಡ್ಸ್ ವಾಹನಕ್ಕೆ ಬೈಕ್‌ ಡಿಕ್ಕಿಯಾಗಿ ಕಾನ್ಸ್‌ಟೇಬಲ್ ಮೃತಪಟ್ಟ ಘಟನೆ ಮಂಗಳವಾರ ತಡರಾತ್ರಿ ನಾಗರಭಾವಿ ಸರ್ವಿಸ್ ರಸ್ತೆಯಲ್ಲಿ ನಡೆದಿದೆ. ಸಶಸ್ತ್ರ ಮೀಸಲು ಪೊಲೀಸ್ ಪಡೆಯ ಕಾನ್ಸ್‌ಟೇಬಲ್ ಮನು ಸಿ.ಬಿ (27) ಮೃತರು.

ತಡರಾತ್ರಿ 8.20ರ ಸುಮಾರಿಗೆ ನಾಗರಭಾವಿಯಿಂದ ನಾಯಂಡಹಳ್ಳಿ ಮಾರ್ಗದಲ್ಲಿ ಬರುತ್ತಿದ್ದ ಮನು ಅವರ ಬೈಕ್‌ ರಸ್ತೆಯ ಬದಿಯಲ್ಲಿ ಬಿದ್ದಿದ್ದ ಮರಳಿನಿಂದ ನಿಯಂತ್ರಣ ತಪ್ಪಿ ಮುಂದಿದ್ದ ಗೂಡ್ಸ್ ವಾಹನಕ್ಕೆ ಡಿಕ್ಕಿಯಾಗಿದೆ. ಪರಿಣಾಮ, ತಲೆ ಮತ್ತು ದೇಹದ ಇತರೆ ಭಾಗಗಳಿಗೆ ತೀವ್ರ ಗಾಯಗಳಾಗಿವೆ. ತಕ್ಷಣ ಇತರೆ ವಾಹನ ಸವಾರರ ಸಹಾಯದಿಂದ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ.

2019ನೇ ಬ್ಯಾಚ್‌ನ ಮನು ಸೋಮವಾರವಷ್ಟೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು ಎಂದು ಅವರ ಸಹೊದ್ಯೋಗಿಗಳು ತಿಳಿಸಿದ್ದಾರೆ. ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು: ಹಿಂಬದಿ ಸವಾರ ಗಂಭೀರ

ABOUT THE AUTHOR

...view details