ಚಿಕ್ಕಮಗಳೂರು:ನಗರದ ಪ್ರಮುಖ ರಸ್ತೆಗಳಲ್ಲಿ ಯುವಕರು ಪ್ಯಾಲೆಸ್ತೀನ್ ಧ್ವಜ ಹಿಡಿದು ಬೈಕ್ ಮೇಲೆ ಓಡಾಡಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
ಬೈಕಿನಲ್ಲಿ ಮೂವರು ಯುವಕರು ಪ್ಯಾಲೆಸ್ತೀನ್ ಧ್ವಜ ಹಿಡಿದು ದಂಟರ ಮಕ್ಕಿ ಭಾಗದಿಂದ ನಗರದ ಹನುಮಂತಪ್ಪ ವೃತ್ತದ ಕಡೆ ಓಡಾಡಿದ್ದಾರೆ. ಸದ್ಯ ಈ ದೃಶ್ಯ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಇನ್ನು ಈ ವಿಡಿಯೋ ಗಮನಿಸಿದ ವಿಶ್ವ ಹಿಂದೂ ಪರಿಷತ್ ಹಾಗೂ ಬಿಜೆಪಿ ಕಾರ್ಯಕರ್ತರು ನಗರ ಪೊಲೀಸ್ ಠಾಣೆ ಮುಂದೆ ಜಮಾಯಿಸಿ ಪ್ಯಾಲೆಸ್ತೀನ್ ಧ್ವಜ ಹಾರಿಸಿದವರ ವಿರುದ್ಧ ಧಿಕ್ಕಾರ ಕೂಗಿ, ಕೂಡಲೇ ಆರೋಪಿಗಳನ್ನು ಬಂಧಿಸಬೇಕು ಎಂದು ಅಗ್ರಹಿಸಿದರು.