ಶಿವಮೊಗ್ಗ: ಹೊಸ ವರ್ಷಾಚರಣೆ ಮುಗಿಸಿ ಬೈಕ್ನಲ್ಲಿ ಹೊರಟಿದ್ದ ಇಬ್ಬರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟು, ಮತ್ತೋರ್ವ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಶಿವಮೊಗ್ಗದ ಎಂಕೆಕೆ ರಸ್ತೆಯಲ್ಲಿ ನಡೆದಿದೆ. ಮೃತನ ಹೆಸರು ಸದ್ಯಕ್ಕೆ ತಿಳಿದುಬಂದಿಲ್ಲ. ಗಾಯಗೊಂಡ ವ್ಯಕ್ತಿಯನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ.
ಬೈಕ್ಗೆ ಡಿಕ್ಕಿ ಹೊಡೆದ ಕಾರು ಅಚ್ಚರಿ ರೀತಿಯಲ್ಲಿ ಪಲ್ಟಿಯಾಗಿದೆ. ಕಾರಿನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದು, ಅವರಿಗೆ ಯಾವುದೇ ಗಾಯಗಳಾದ ಮಾಹಿತಿ ಇಲ್ಲ. ಘಟನೆ ಬಳಿಕ ಸ್ಥಳೀಯರು ಕಾರಿನಲ್ಲಿದ್ದ ನಾಲ್ವರಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ.