ಕರ್ನಾಟಕ

karnataka

ETV Bharat / state

ಬಿಟ್ ಕಾಯಿನ್ ಹಗರಣ: ಮತ್ತೋರ್ವ ಪೊಲೀಸ್ ಇನ್ಸ್‌ಪೆಕ್ಟರ್ ಬಂಧನ

ಬಿಟ್​ ಕಾಯಿನ್​ ಹಗರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಪೊಲೀಸ್​ ಅಧಿಕಾರಿಯನ್ನು ಬಂಧಿಸಲಾಗಿದೆ.

ಬಿಟ್ ಕಾಯಿನ್ ಹಗರಣ: ಮತ್ತೋರ್ವ ಇನ್ಸ್‌ಪೆಕ್ಟರ್ ಬಂಧನ
ಬಿಟ್ ಕಾಯಿನ್ ಹಗರಣ: ಮತ್ತೋರ್ವ ಇನ್ಸ್‌ಪೆಕ್ಟರ್ ಬಂಧನ

By ETV Bharat Karnataka Team

Published : Feb 29, 2024, 9:58 PM IST

ಬೆಂಗಳೂರು:‌ಬಿಟ್ ಕಾಯಿನ್ ಹಗರಣ ಪ್ರಕರಣದಲ್ಲಿ ಮತ್ತೊಬ್ಬ ಪೊಲೀಸ್‌ ಅಧಿಕಾರಿಯನ್ನು ಸಿಐಡಿಯ ಎಸ್ಐಟಿ (ವಿಶೇಷ ತನಿಖಾ ತಂಡ) ಬುಧವಾರ ಬಂಧಿಸಿದೆ. ಈ ಹಿಂದೆ ಪ್ರಕರಣದ ತನಿಖೆ ನಡೆಸಿದ್ದ ಸಿಸಿಬಿ ತನಿಖಾಧಿಕಾರಿ ಇನ್ಸ್‌ಪೆಕ್ಟರ್ ಲಕ್ಷ್ಮಿಕಾಂತಯ್ಯ ಬಂಧಿತರು. ಇವರನ್ನು ನಗರದ 1ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗೆ ಮಾರ್ಚ್ 7ರವರೆಗೆ ಎಸ್ಐಟಿ ವಶಕ್ಕೆ ಪಡೆದುಕೊಂಡಿದೆ.

ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಿದ್ದ ಬಿಟ್ ಕಾಯಿನ್ ಹಗರಣದ ಮರುತನಿಖೆಗೆ ಎಸ್ಐಟಿ ರಚಿಸಿ ರಾಜ್ಯ ಸರ್ಕಾರ ಆದೇಶಿಸಿತ್ತು. ಇದರ ಮುಖ್ಯಸ್ಥರನ್ನನಾಗಿ ಸಿಐಡಿ ಎಡಿಜಿಪಿ ಮನೀಷ್ ಕರ್ಬೀಕರ್ ಅವ​ರನ್ನು ನೇಮಿಸಲಾಗಿದ್ದು, ತಂಡದಲ್ಲಿ ಡಿಐಜಿ ವಂಶಿಕೃಷ್ಣ, ಡಿಸಿಪಿ ಅನೂಪ್ ಶೆಟ್ಟಿ ಹಾಗು ಎಸ್.ಪಿ ಶರತ್ ಇದ್ದಾರೆ.

ಬಿಟ್​ ಕಾಯಿನ್​ ಹಗರಣವೇನು?:2020ರಲ್ಲಿ ಕೆಂಪೇಗೌಡ ನಗರ ಪೊಲೀಸರು ಡ್ರಗ್ಸ್ ಪ್ರಕರಣದಲ್ಲಿ ಆರೋಪಿ ಸುಜಯ್ ಎಂಬಾತನನ್ನು ಬಂಧಿಸಿದ್ದರು. ಈ ವೇಳೆ ಡಾರ್ಕ್ ನೆಟ್‌ನಲ್ಲಿ ಬಿಟ್‌ಕಾಯಿನ್ ಮೂಲಕ ಡ್ರಗ್ಸ್ ಖರೀದಿ ಪ್ರಕರಣ ಬೆಳಕಿಗೆ ಬಂದಿತ್ತು. ಪ್ರಕರಣದ ಜಾಡು ಹಿಡಿದು ಸಾಗಿದ ಪೊಲೀಸರು ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಎಂಬಾತನನ್ನು ಬಂಧಿಸಿದ್ದರು. ಆಗ ಸರ್ಕಾರಿ ವೆಬ್‌ಸೈಟ್ ಹಾಗೂ ಆನ್‌ಲೈನ್ ಗೇಮಿಂಗ್ ಆ್ಯಪ್‌ಗಳನ್ನು ಹ್ಯಾಕ್‌ ಮಾಡಿ ಕೋಟ್ಯಂತರ ರೂಪಾಯಿ ಹಣ‌ವನ್ನು ಅಕ್ರಮವಾಗಿ ಸಂಪಾದಿಸಿರುವ ಕುರಿತ ಮಾಹಿತಿ ಬಯಲಾಗಿತ್ತು. ಇದರ ನಂತರ ಪ್ರಕರಣವನ್ನು ಆಗಿನ ಸರ್ಕಾರ ಸಿಸಿಬಿಗೆ ಹಸ್ತಾಂತರಿಸಿತ್ತು. ಸಿಸಿಬಿ ತನಿಖೆಯಲ್ಲಿ ದೊಡ್ಡ ಪ್ರಮಾಣದಲ್ಲಿ ವಂಚನೆ ನಡೆದಿರುವುದು ಬೆಳಕಿಗೆ ಬಂದಿತ್ತು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪ್ರಕರಣದ ಮರುತನಿಖೆಗಾಗಿ ಎಸ್ಐಟಿ ರಚಿಸಿದೆ. ಜನವರಿಯಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಸೇರಿ ಐವರನ್ನು ಎಸ್ಐಟಿ ವಶಕ್ಕೆ ಪಡೆದಿತ್ತು. ಈ ಐವರು ಆರೋಪಿಗಳು ಪ್ರಕರಣದಲ್ಲಿ ಉದ್ದೇಶಪೂರ್ವಕವಾಗಿ ಸಾಕ್ಷ್ಯ ನಾಶಪಡಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು.

ಇದನ್ನೂ ಓದಿ:ಬಿಟ್​ಕಾಯಿನ್ ಹಗರಣ: ಇನ್‌ಸ್ಪೆಕ್ಟರ್, ಖಾಸಗಿ ಕಂಪನಿಯ ಸೈಬರ್ ಪರಿಣಿತನಿಗೆ ಜಾಮೀನು

ABOUT THE AUTHOR

...view details