ಕರ್ನಾಟಕ

karnataka

ETV Bharat / state

ಬೈ ಎಲೆಕ್ಷನ್ ದಿನ ಬಜೆಟ್ ಮಂಡನೆ ಬೇಡ: ಆಯವ್ಯಯ ಮುಂದೂಡಲು ರಾಜ್ಯಪಾಲರಿಗೆ ಬಿಜೆಪಿ ಮನವಿ - ರಾಜ್ಯ ಬಿಜೆಪಿ ನಿಯೋಗ

ಪರಿಷತ್ ಬೈ ಎಲೆಕ್ಷನ್ ದಿನ ಬಜೆಟ್​ ಮಂಡನೆ ಸರಿಯಲ್ಲ. ಹಾಗಾಗಿ, ಬಜೆಟ್ ಮಂಡನೆ ದಿನಾಂಕ ಮುಂದೂಡುವಂತೆ ಬಿಜೆಪಿ ನಿಯೋಗವು ರಾಜ್ಯಪಾಲರಿಗೆ ಮನವಿ ಮಾಡಿದೆ.

ಆಯವ್ಯಯ ಮುಂದೂಡಲು ರಾಜ್ಯಪಾಲರಿಗೆ ಬಿಜೆಪಿ ಮನವಿ
ಆಯವ್ಯಯ ಮುಂದೂಡಲು ರಾಜ್ಯಪಾಲರಿಗೆ ಬಿಜೆಪಿ ಮನವಿ

By ETV Bharat Karnataka Team

Published : Jan 24, 2024, 5:39 PM IST

ಬೆಂಗಳೂರು: ವಿಧಾನ ಪರಿಷತ್ ಉಪಚುನಾವಣೆ ನಡೆಯುವ ದಿನದಂದು ರಾಜ್ಯ ಬಜೆಟ್ ಮಂಡಿಸುವುದು ಸರಿಯಲ್ಲ. ಹಾಗಾಗಿ, ಬಜೆಟ್ ಮಂಡನೆ ದಿನಾಂಕ ಬದಲಾವಣೆ ಮಾಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ರಾಜ್ಯಪಾಲರಿಗೆ ರಾಜ್ಯ ಬಿಜೆಪಿ ನಿಯೋಗ ಮನವಿ ಮಾಡಿದೆ.

ಮಾಜಿ ಡಿಸಿಎಂ ಡಾ. ಸಿ ಎನ್ ಅಶ್ವತ್ಥನಾರಾಯಣ ನೇತೃತ್ವದ ಬಿಜೆಪಿ ನಿಯೋಗವು ಇಂದು ರಾಜಭವನಕ್ಕೆ ಭೇಟಿ ನೀಡಿತ್ತು. ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ, ಬಜೆಟ್ ಮಂಡನೆ ದಿನಾಂಕ ಬದಲಾವಣೆ ಮಾಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಮನವಿ ಸಲ್ಲಿಸಿತು.

ಆಯವ್ಯಯ ಮುಂದೂಡಲು ರಾಜ್ಯಪಾಲರಿಗೆ ಬಿಜೆಪಿ ಮನವಿ

ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಮಾಜಿ ಉಪ ಮುಖ್ಯಮಂತ್ರಿ ಡಾ. ಸಿ ಎನ್ ಅಶ್ವತ್ಥನಾರಾಯಣ್, ಚುನಾವಣಾ ಆಯೋಗವು ಬೆಂಗಳೂರಿನ ವಿಧಾನಪರಿಷತ್ತಿನ ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಗೆ ಫೆಬ್ರವರಿ 16ರಂದು ದಿನಾಂಕ ನಿಗದಿಗೊಳಿಸಿದೆ. ಮತದಾನದ ದಿನವೇ ರಾಜ್ಯ ಸರ್ಕಾರದ ಬಜೆಟ್ ಕೂಡಾ ಮಂಡನೆ ಆಗಲಿದೆ. ಮಾದರಿ ನೀತಿಸಂಹಿತೆ ಮತ್ತು ಜನಪ್ರತಿನಿಧಿ ಕಾಯ್ದೆ ಪ್ರಕಾರ ಇದು ನ್ಯಾಯಬದ್ಧವಲ್ಲ. ಬಜೆಟ್ ದಿನವೇ ಚುನಾವಣೆ ಮಾಡುವ ಬದಲು ಬಜೆಟ್ ಮಂಡನೆ ದಿನಾಂಕವನ್ನು ಮುಂದಕ್ಕೆ ಹಾಕಲು ಕೋರಲಾಗಿದೆ. ಈ ಸಂಬಂಧ ರಾಜ್ಯಪಾಲರನ್ನು ಭೇಟಿ ಮಾಡಿ ರಾಜ್ಯ ಸರ್ಕಾರಕ್ಕೆ ಸ್ಪಷ್ಟ ಸೂಚನೆ ನೀಡಲು ಕೋರಿದ್ದೇವೆ. ಆ ದಿನ ಬಜೆಟ್ ಮಂಡಿಸಿದರೆ ಅದು ಮತದಾನದ ಮೇಲೆ ಪರಿಣಾಮ ಬೀರಲಿದೆ ಎಂದು ಗಮನಕ್ಕೆ ತರಲಾಗಿದೆ ಎಂದು ವಿವರ ನೀಡಿದ್ದಾರೆ.

ಬಜೆಟ್ ಮಂಡನೆ ದಿನವನ್ನು ಮುಂದೂಡಬೇಕು. ಚುನಾವಣೆ ದಿನವೇ ಬಜೆಟ್ ಮಂಡಿಸದಂತೆ ಸೂಚಿಸಲು ಕೋರಿದ್ದೇವೆ. ರಾಜ್ಯ ಸರ್ಕಾರಕ್ಕೆ ಈ ಕುರಿತು ಸೂಚಿಸುವುದಾಗಿ ರಾಜ್ಯಪಾಲರೂ ತಿಳಿಸಿದ್ದಾರೆ ಎಂದು ಹೇಳಿದ್ದಾರೆ. ಇದಲ್ಲದೇ ಚುನಾವಣಾ ಆಯೋಗಕ್ಕೂ ಮನವಿ ಕೊಡಲಿದ್ದೇವೆ ಎಂದು ತಿಳಿಸಿದ್ದಾರೆ.

ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್‍ಕುಮಾರ್, ಮಾಜಿ ಸಚಿವರು ಮತ್ತು ರಾಜ್ಯ ಉಪಾಧ್ಯಕ್ಷರಾದ ಬೈರತಿ ಬಸವರಾಜ್, ಹರತಾಳು ಹಾಲಪ್ಪ, ಮಾಜಿ ಸಚಿವ ಮುನಿರತ್ನ, ಯುವಮೋರ್ಚಾ ರಾಜ್ಯ ಅಧ್ಯಕ್ಷ ಧೀರಜ್ ಮುನಿರಾಜ್, ಇತರ ಪ್ರಮುಖರು ಜೊತೆಗೂಡಿ ಈ ಮನವಿ ಸಲ್ಲಿಸಿದ್ದಾರೆ.

ಇದನ್ನೂ ಓದಿ:ಸರ್ಕಾರದಿಂದ ಗ್ರೀನ್ ಸಿಗ್ನಲ್; ಮಾರ್ಚ್ ಮೊದಲ ವಾರ ಬಿಬಿಎಂಪಿ ಬಜೆಟ್ ಮಂಡನೆ

ABOUT THE AUTHOR

...view details