ಬೆಂಗಳೂರು:ರಾಜ್ಯ ರಾಜಧಾನಿಗೆ ಮೋದಿ ನೇತೃತ್ವದ ಬಿಜೆಪಿ ಸರ್ಕಾರದಿಂದ ಸಾಕಷ್ಟು ಅಭಿವೃದ್ಧಿ ಕಾರ್ಯಗಳಾಗಿದೆ. ಬಹುನಿರೀಕ್ಷಿತ ವೆಗಾಸಿಟಿಯಿಂದ ನಾಯಂಡಹಳ್ಳಿವರೆಗಿನ 24 ಕಿ.ಮೀ ಉದ್ದದ 3ನೇ ಹಂತದ ಮೆಟ್ರೋ ರೈಲು ಮಾರ್ಗಕ್ಕೆ ಮೋದಿ ಅವರು ಮತ್ತೊಮ್ಮೆ ಅಧಿಕಾರಕ್ಕೆ ಬಂದ 3 ತಿಂಗಳಲ್ಲೇ ಒಪ್ಪಿಗೆ ದೊರಕಿಸಿಕೊಡಲಾಗುವುದು ಎಂದು ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಭರವಸೆ ನೀಡಿದ್ದಾರೆ.
ಜೆ.ಪಿ.ನಗರದ ಪಾಂಡುರಂಗ ನಗರದ ನಿವಾಸಿಗಳೊಂದಿಗೆ ಇಂದು ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಸಂಚಾರ ದಟ್ಟಣೆ ನಿಯಂತ್ರಣಕ್ಕೆ 40 ವರ್ಷಗಳಿಂದ ಬೇಡಿಕೆಯಾಗಿದ್ದ ಸಬ್ ಅರ್ಬನ್ ರೈಲು ಯೋಜನೆಗೆ ಈಗಾಗಲೇ ಕೇಂದ್ರದಿಂದ ಒಪ್ಪಿಗೆ ದೊರೆತಿದೆ. ಉಪನಗರ ವರ್ತುಲ ರಸ್ತೆ ಯೋಜನೆಗೂ ಮಂಜೂರಾತಿ ದೊರೆತಿದೆ. ಆರ್.ವಿ.ರಸ್ತೆಯಿಂದ ಎಲೆಕ್ಟ್ರಾನಿಕ್ ಸಿಟಿವರೆಗಿನ ಹಳದಿ ಮೆಟ್ರೋ ರೈಲು ಮಾರ್ಗ ಸೆಪ್ಟೆಂಬರ್ನಲ್ಲಿ ಆರಂಭಗೊಳ್ಳಲಿದೆ ಎಂದು ತಿಳಿಸಿದರು.
ಪ್ರಧಾನಿ ಅಮೆರಿಕಕ್ಕೆ ಭೇಟಿ ನೀಡಿದ್ದ ವೇಳೆ ಬೆಂಗಳೂರಿನಲ್ಲಿ ಅಮೆರಿಕ ದೂತವಾಸ ಕಚೇರಿ ಆರಂಭಕ್ಕೆ ಒಪ್ಪಿಗೆ ದೊರೆತಿದೆ. ಆದರೆ, ಕಾಂಗ್ರೆಸ್ ಸರ್ಕಾರ ಜಾಗ ನೀಡುತ್ತಿಲ್ಲ ಎಂದು ಆರೋಪಿಸಿದರು.