ಹುಬ್ಬಳ್ಳಿ:"ಉತ್ತರ ಕರ್ನಾಟಕ ಸಮಸ್ಯೆ ಬಗ್ಗೆ ಚರ್ಚೆ ಮಾಡಲು ಬಿಜೆಪಿಗೆ ಇಂಟ್ರಸ್ಟೇ ಇಲ್ಲ. ಬಿಜೆಪಿಯವರಿಗೆ ರಾಜಕಾರಣ ಬಿಟ್ಟರೆ ಮತ್ತೇನೂ ಗೊತ್ತಿಲ್ಲ" ಎಂದು ಡಿ ಕೆ ಶಿವಕುಮಾರ್ ಟೀಕಿಸಿದರು.
ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, "ಉತ್ತರ ಕರ್ನಾಟಕದ ಸರ್ವ ಸಮಸ್ಯೆ ಬಗ್ಗೆ ಚರ್ಚಿಸಲು ನಾವು ಸಿದ್ಧರಿದ್ದೇವೆ. ನೀರಾವರಿ ಸಮಸ್ಯೆ ಸೇರಿ ಎಲ್ಲ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲಿದ್ದೇವೆ. ಮಹಾದಾಯಿ ಯೋಜನೆ ಅನುಷ್ಠಾನ ವಿಚಾರಕ್ಕೆ ಇತ್ತೀಚೆಗೆ ಕೇಂದ್ರ ಅರಣ್ಯ ಸಚಿವರನ್ನೂ ಭೇಟಿ ಮಾಡಿದೆ. ಕೇಂದ್ರ ಅರಣ್ಯ ಸಚಿವರಿಗೆ ಜೋಶಿಯವರು ಮಹದಾಯಿ ಕುರಿತು ವಿಷಯ ತಿಳಿಸಿದ್ದಾರೆ. ನಾನು ಕೂಡ ವಿಷಯ ತಿಳಿಸಿದ್ದೇನೆ. ಮಹದಾಯಿ ವಿಚಾರವಾಗಿ ಕೇಂದ್ರ ಅರಣ್ಯ ಸಚಿವರನ್ನು ಭೇಟಿ ಮಾಡಿದ್ದೇನೆ. ಜೋಶಿ ಅವರನ್ನು ಸಹ ಭೇಟಿ ಮಾಡಿದ್ದೇನೆ. ಅವರು ಯಾವಾಗ ಅನುಮತಿ ಕೋಡತ್ತಾರೆ ಅಂತ ಕಾಯುತ್ತಿದ್ದೇವೆ" ಎಂದು ಹೇಳಿದರು.