ತುಮಕೂರು:ಹೇಮಾವತಿ ಲಿಂಕ್ ಕೆನಾಲ್ ಯೋಜನೆ ವಿರೋಧಿಸಿ ಪಾದಯಾತ್ರೆ ನಡೆಸುತ್ತಿರುವ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಇಂದು ತುಮಕೂರಿನ ಗೊಲ್ಲಹಳ್ಳಿಯಲ್ಲಿರುವ ಗೃಹ ಸಚಿವ ಜಿ.ಪರಮೇಶ್ವರ್ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಪೊಲೀಸರು ಶಾಸಕ ಸುರೇಶ್ ಗೌಡ ಅವರನ್ನು ತಡೆದರು.
ಬಿಜೆಪಿ, ಜೆಡಿಎಸ್ ಮುಖಂಡರಿಂದ ಗೃಹ ಸಚಿವ ಪರಮೇಶ್ವರ್ ಮನೆಗೆ ಮುತ್ತಿಗೆ ಯತ್ನ - HEMAVATHI LINK CANAL PROJECT
ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆ ವಿರೋಧಿಸಿ ಬಿಜೆಪಿ, ಜೆಡಿಎಸ್ ನಾಯಕರು ಶನಿವಾರದಿಂದ ಪಾದಯಾತ್ರೆ ಆರಂಭಿಸಿದ್ದಾರೆ.
Published : Dec 8, 2024, 2:54 PM IST
|Updated : Dec 8, 2024, 4:17 PM IST
ಜಿಲ್ಲೆಗೆ ಸರಬರಾಜಾಗುವ ಹೇಮಾವತಿ ನದಿ ನೀರನ್ನು ಮಾಗಡಿಗೆ ತೆಗೆದುಕೊಂಡು ಹೋಗುವ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆ ವಿರೋಧಿಸಿ ಶನಿವಾರದಿಂದ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಪಾದಯಾತ್ರೆ ಆರಂಭಿಸಿದ್ದಾರೆ. ಇಂದು ಜಿಲ್ಲಾಧಿಕಾರಿ ಕಚೇರಿಯೆದುರು ಧರಣಿ ನಡೆಸಲು ನಿರ್ಧರಿಸಿದ್ದರು. ಗುಬ್ಬಿಯಿಂದ ತುಮಕೂರು ನಗರದ ಕಡೆಗೆ ಪಾದಯಾತ್ರೆಯಲ್ಲಿ ಆಗಮಿಸಿದ ನಾಯಕರು, ಕಾಂಗ್ರೆಸ್ ಸರ್ಕಾರದ ಧೋರಣೆ ವಿರುದ್ಧ ಘೋಷಣೆಗಳನ್ನು ಕೂಗಿದರು.
ಇದನ್ನೂ ಓದಿ:ಹೇಮಾವತಿ ಲಿಂಕ್ ಕೆನಾಲ್ ಯೋಜನೆ ವಿರೋಧಿಸಿ ಬೃಹತ್ ಪಾದಯಾತ್ರೆ ಆರಂಭ