ಕರ್ನಾಟಕ

karnataka

ETV Bharat / state

ಮೂರು ದಿನದಲ್ಲಿ ಜೆಡಿಎಸ್ ಅಭ್ಯರ್ಥಿಗಳ ಘೋಷಣೆ: ಮತ್ತೊಂದು ಕ್ಷೇತ್ರ ಕೇಳಿದ್ದೇವೆ ಎಂದ ಜಿ.ಟಿ.ದೇವೇಗೌಡ - gt devegowda

ಇನ್ನೂ ಒಂದು ಕ್ಷೇತ್ರವನ್ನು ಜೆಡಿಎಸ್​ಗೆ ಬಿಟ್ಟುಕೊಡುವಂತೆ ಬಿಜೆಪಿ ವರಿಷ್ಠರಿಗೆ ಮನವಿ ಮಾಡಲಾಗಿದೆ ಎಂದು ಜಿ.ಟಿ.ದೇವೇಗೌಡ ತಿಳಿಸಿದ್ದಾರೆ.

ಇನ್ನು ಮೂರು ದಿನದಲ್ಲಿ ಜೆಡಿಎಸ್ ಅಭ್ಯರ್ಥಿಗಳ ಘೋಷಣೆ, ಮತ್ತೊಂದು ಕ್ಷೇತ್ರ ಕೇಳಿದ್ದೇವೆ ಎಂದ ಜಿ.ಟಿ.ದೇವೇಗೌಡ
ಇನ್ನು ಮೂರು ದಿನದಲ್ಲಿ ಜೆಡಿಎಸ್ ಅಭ್ಯರ್ಥಿಗಳ ಘೋಷಣೆ, ಮತ್ತೊಂದು ಕ್ಷೇತ್ರ ಕೇಳಿದ್ದೇವೆ ಎಂದ ಜಿ.ಟಿ.ದೇವೇಗೌಡ

By ETV Bharat Karnataka Team

Published : Mar 14, 2024, 7:37 PM IST

ಬೆಂಗಳೂರು: ಲೋಕಸಭೆ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳನ್ನು ಮೂರು ದಿನದಲ್ಲಿ ಘೋಷಣೆ ಮಾಡಲಿದ್ದು, ಇನ್ನೂ ಒಂದು ಕ್ಷೇತ್ರವನ್ನು ಬಿಟ್ಟುಕೊಡುವಂತೆ ಬಿಜೆಪಿ ವರಿಷ್ಠರನ್ನು ಕೋರಲಾಗುವುದು ಎಂದು ಮಾಜಿ ಸಚಿವ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಹೇಳಿದ್ದಾರೆ.

ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಹಾಸನ, ಮಂಡ್ಯ, ಕೋಲಾರ ಕ್ಷೇತ್ರವನ್ನು ನಮ್ಮ ಪಕ್ಷಕ್ಕೆ ಬಿಟ್ಟುಕೊಟ್ಟಿದ್ದು, ನಾವು ಪ್ರಾಬಲ್ಯವಿರುವ ಮತ್ತೊಂದು ಕ್ಷೇತ್ರವನ್ನು ಬಿಟ್ಟುಕೊಡುವಂತೆ ಕೇಳಿದ್ದೇವೆ. ರಾಜ್ಯಾಧ್ಯಕ್ಷರು ಇನ್ನು ಮೂರು ದಿನದಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಪ್ರಕಟಿಸಲಿದ್ದಾರೆ ಎಂದು ತಿಳಿಸಿದರು. ಬಿಜೆಪಿಯವರು ಕೂಡ ಮತ್ತೊಂದು ಕ್ಷೇತ್ರವನ್ನು ಬಿಟ್ಟುಕೊಡಲು ಸಿದ್ಧರಿದ್ದಾರೆ, ಮೈಸೂರು ಕ್ಷೇತ್ರಕ್ಕೆ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಕೊಡುವಂತೆ ನಿನ್ನೆಯವರೆಗೂ ಮನವಿ ಮಾಡಿದ್ದೆವು. ಆದರೆ, ಪ್ರಧಾನಿ ನರೇಂದ್ರ ಮೋದಿಯವರು ಮೈಸೂರು ರಾಜಮನೆತನದ ಇತಿಹಾಸದ ಕೊಡುಗೆಗಳನ್ನು ಆಧರಿಸಿ ಅವರ ಕುಟುಂಬದವರಿಗೆ ಟಿಕೆಟ್ ಕೊಟ್ಟಿದ್ದಾರೆ.

ಬಿಜೆಪಿ - ಜೆಡಿಎಸ್‍ನಲ್ಲಿ ಯಾರೇ ಅಭ್ಯರ್ಥಿಗಳಿದ್ದರೂ ಎರಡೂ ಪಕ್ಷಗಳು ಒಟ್ಟಾಗಿ ಚುನಾವಣೆ ಎದುರಿಸಿ ರಾಜ್ಯದ 28 ಕ್ಷೇತ್ರಗಳಲ್ಲಿ ಗೆಲ್ಲಲು ಹೋರಾಟ ನಡೆಸುತ್ತೇವೆ ಎಂದು ಹೇಳಿದರು. ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿಯವರು ಪ್ರಧಾನಿಯಾಗಬೇಕು ಎಂಬುದು ನಮ್ಮ ಗುರಿಯಾಗಿದ್ದು, ಆ ನಿಟ್ಟಿನಲ್ಲಿ ಜೆಡಿಎಸ್ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡು ಚುನಾವಣೆ ಎದುರಿಸುತ್ತಿದೆ ಎಂದರು.

ಇದನ್ನೂ ಓದಿ:ಕೋಲಾರ, ಮಂಡ್ಯ, ಹಾಸನದಲ್ಲಿ ಜೆಡಿಎಸ್​ಗೆ ಟಿಕೆಟ್: ಎನ್​​ಡಿಎ ಅಭ್ಯರ್ಥಿಗಳನ್ನು ಗೆಲ್ಲಿಸಿ ಎಂದ ದೇವೇಗೌಡರು

ABOUT THE AUTHOR

...view details