ಕರ್ನಾಟಕ

karnataka

ETV Bharat / state

ರಾಜ್ಯದ ಕಾಂಗ್ರೆಸ್ ಸರ್ಕಾರ ವಜಾಗೊಳಿಸಲು ರಾಜ್ಯಪಾಲರಿಗೆ ಬಿಜೆಪಿ ನಿಯೋಗದ ಮನವಿ - ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಜೈಕಾರದ ಸುದ್ದಿ ಮಾಧ್ಯಮಗಳಲ್ಲಿ ಬಂದು ಜನರಿಗೆ ಗೊತ್ತಾದರೂ ಜನರ ಕಣ್ಣಿಗೆ ಮಣ್ಣೆರಚುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಹೀಗೆಯೇ ಬಿಟ್ಟರೆ ವಿಧಾನಸೌಧ ಕೂಡ ಭಯೋತ್ಪಾದಕರ ತಾಣವಾಗಲಿದೆ. ಆದ್ದರಿಂದ ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸುವಂತೆ ರಾಜ್ಯಪಾಲರಿಗೆ ಬಿಜೆಪಿ ನಿಯೋಗ ಮನವಿ ಮಾಡಿತು.

Etv Bharat
Etv Bharat

By ETV Bharat Karnataka Team

Published : Feb 29, 2024, 10:55 PM IST

Updated : Feb 29, 2024, 11:05 PM IST

ಪ್ರತಿಪಕ್ಷ ನಾಯಕ ಆರ್.ಅಶೋಕ

ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಆರೋಪ ಪ್ರಕರಣದ ಆರೋಪಿಗಳ ಇನ್ನೂ ಬಂಧಿಸದ ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸುವಂತೆ ರಾಜ್ಯಪಾಲರಿಗೆ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ನೇತೃತ್ವದ ಬಿಜೆಪಿ ನಿಯೋಗ ಮನವಿ ಮಾಡಿದೆ. ದೇಶದ್ರೋಹಿಗಳಿಗೆ ರಕ್ಷಣೆ ನೀಡುತ್ತಿರುವ ಸರ್ಕಾರ, ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಿದೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

ಅಶೋಕ್ ನೇತೃತ್ವದ ಬಿಜೆಪಿ ನಿಯೋಗ ರಾಜಭವನಕ್ಕೆ ಭೇಟಿ ನೀಡಿತು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ದೂರು ನೀಡಿ ಸರ್ಕಾರವನ್ನು ವಜಾಗೊಳಿಸುವಂತೆ ಒತ್ತಾಯಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಿಪಕ್ಷ ನಾಯಕ ಆರ್‌ ಅಶೋಕ್, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಭಯೋತ್ಪಾದನಾ ಚಟುವಟಿಕೆ ಹೆಚ್ಚಿದೆ. ಪಾಕಿಸ್ತಾನಕ್ಕೆ ಜೈಕಾರ ಹಾಕಿದವರನ್ನು ಬಂಧಿಸಿ ಎಂದು ಆಗ್ರಹಿಸಿದರೆ ಸರ್ಕಾರ ಅವರನ್ನು ಬಿಟ್ಟುಬಿಡಿ ಎಂದು ಪೊಲೀಸರಿಗೆ ಸೂಚಿಸಿದೆ. ಎಫ್‍ಎಸ್‍ಎಲ್ ವರದಿ ಪರಿಶೀಲನೆ ಎಂದು ಹೇಳಿ ಯಾವುದೋ ವಾಹಿನಿಯ ವಿಡಿಯೋ ಪಡೆದು ಪರೀಕ್ಷೆ ನಡೆಸಿ ಸುಳ್ಳು ವರದಿ ರೂಪಿಸಲಾಗುತ್ತಿದೆ. ಇದನ್ನು ಮುಚ್ಚಿ ಹಾಕಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ದೂರಿದರು.

ರಾಜ್ಯದ ಕಾಂಗ್ರೆಸ್ ಸರ್ಕಾರ ವಜಾಗೊಳಿಸಲು ರಾಜ್ಯಪಾಲರಿಗೆ ಬಿಜೆಪಿ ನಿಯೋಗದ ಮನವಿ

ಜೈಕಾರದ ಸುದ್ದಿ ಮಾಧ್ಯಮಗಳಲ್ಲಿ ಬಂದು ಜನರಿಗೆ ಗೊತ್ತಾದರೂ ಜನರ ಕಣ್ಣಿಗೆ ಮಣ್ಣೆರಚುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಹೀಗೆಯೇ ಬಿಟ್ಟರೆ ವಿಧಾನಸೌಧ ಕೂಡ ಭಯೋತ್ಪಾದಕರ ತಾಣವಾಗಲಿದೆ. ಕೆಂಗಲ್ ಹನುಮಂತಯ್ಯ ಅವರು ಕಟ್ಟಿದ ವಿಧಾನಸೌಧವನ್ನು ಉಳಿಸಲು ನಾವು ಹೋರಾಟ ಮಾಡುತ್ತಿದ್ದೇವೆ. ಸರ್ಕಾರದ ಕೆಲಸ ದೇವರ ಕೆಲಸ ಎಂದರೆ, ಈ ಸರ್ಕಾರ ಅದಕ್ಕೆ ಅಪಮಾನ ಮಾಡುತ್ತಿದೆ. ಆದ್ದರಿಂದ ಈ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು ಆಗ್ರಹಿಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತಲೆಯಲ್ಲಿ ಹಿಂದೂ ವಿರೋಧಿ ಕಾರ್ಕೋಟಕ ವಿಷ, ಪ್ರಧಾನಿ ಮೋದಿ ವಿರುದ್ಧ ದ್ವೇಷ ತುಂಬಿದೆ. ಮೋದಿ ಎಂದರೆ ಕಾಂಗ್ರೆಸ್ ನಾಯಕರು ಭಯ ಪಡುತ್ತಾರೆ ಎಂದರು. ಬಿ.ಕೆ.ಹರಿಪ್ರಸಾದ್ ಅವರು ಪಾಕಿಸ್ತಾನಿಗಳು ಸಹೋದರರು ಎನ್ನುತ್ತಾರೆ. ಕಾಂಗ್ರೆಸ್ ನಾಯಕರ ಮನಸ್ಸಿನ ಪೂರ್ತಿ ಪಾಕಿಸ್ತಾನ ತುಂಬಿಕೊಂಡಿದೆ. ಇದೇ ರೀತಿ ಕುಕ್ಕರ್ ಬಾಂಬ್ ಸ್ಫೋಟಗೊಂಡಾಗ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ನನ್ನ ಬ್ರದರ್ಸ್ ಎಂದಿದ್ದರು ಎಂದು ನೆನಪಿಸಿದರು.

ರಾಜ್ಯದ ಕಾಂಗ್ರೆಸ್ ಸರ್ಕಾರ ವಜಾಗೊಳಿಸಲು ರಾಜ್ಯಪಾಲರಿಗೆ ಬಿಜೆಪಿ ನಿಯೋಗದ ಮನವಿ

ಎಫ್‍ಎಸ್‍ಎಲ್ ವರದಿ ಬಹಿರಂಗಪಡಿಸಿ: ರಾಜ್ಯ ಸರ್ಕಾರಕ್ಕೆ ತಾಕತ್ತಿದ್ದರೆ ಎಫ್‍ಎಸ್‍ಎಲ್ ವರದಿ ಬಹಿರಂಗಪಡಿಸಲಿ. ಯಾರನ್ನೋ ರಕ್ಷಣೆ ಮಾಡಲು ಸರ್ಕಾರ ವರದಿಯನ್ನು ಮುಚ್ಚಿಡುವುದು ಬೇಡ. ಈಗಾಗಲೇ ಮಾಧ್ಯಮಗಳಲ್ಲಿ ಈ ಸುದ್ದಿ ಬಂದಿದೆ. ಈಗ ಜನರಿಗೆ ವರದಿ ನೀಡಲಿ ಎಂದು ಆರ್.ಅಶೋಕ ಆಗ್ರಹಿಸಿದರು.

ಜಾತಿ ಗಣತಿ ಅವೈಜ್ಞಾನಿಕ: ಸರ್ಕಾರ ರೂಪಿಸಿರುವ ಜಾತಿ ಗಣತಿ ಅವೈಜ್ಞಾನಿಕವಾಗಿದ್ದು, ಇದನ್ನು ವೈಜ್ಞಾನಿಕವಾಗಿ ರೂಪಿಸಲಿ. ಸರಿಯಾದ ಅಂಕಿ ಅಂಶ ಸಂಗ್ರಹಿಸಿ ವರದಿ ರೂಪಿಸಲಿ ಎಂದು ಆರ್.ಅಶೋಕ ಒತ್ತಾಯಿಸಿದರು.

ಇದನ್ನೂ ಓದಿ:ಸರ್ಕಾರಕ್ಕೆ ಜಾತಿಗಣತಿ ವರದಿ ಸಲ್ಲಿಕೆ: ಪರಿಶೀಲಿಸಿ ಸೂಕ್ತ ಕ್ರಮ- ಸಿಎಂ ಸಿದ್ದರಾಮಯ್ಯ

Last Updated : Feb 29, 2024, 11:05 PM IST

ABOUT THE AUTHOR

...view details