ಕರ್ನಾಟಕ

karnataka

ETV Bharat / state

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ನಾನೇ ಮುಖ್ಯಮಂತ್ರಿ: ಯತ್ನಾಳ್‌ - Basangouda Patil Yatnal - BASANGOUDA PATIL YATNAL

ನಾನು ಯಾರಿಗೂ ಅಪ್ಪಾಜಿ, ಅಪ್ಪಾಜಿ ಅಂತ ಕಾಲಿಗೆ ನಮಸ್ಕರಿಸುವುದಿಲ್ಲ. ದೇವರು ನನಗೆ ಎಲ್ಲವನ್ನೂ ಕೊಟ್ಟಿದ್ದಾನೆ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದ್ದಾರೆ.

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೇ ನಾನೇ ಮುಖ್ಯಮಂತ್ರಿ ಆಗುತ್ತೇನೆ: ಬಸನಗೌಡ ಪಾಟೀಲ್‌ ಯತ್ನಾಳ್‌
ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೇ ನಾನೇ ಮುಖ್ಯಮಂತ್ರಿ ಆಗುತ್ತೇನೆ: ಬಸನಗೌಡ ಪಾಟೀಲ್‌ ಯತ್ನಾಳ್‌

By ETV Bharat Karnataka Team

Published : Apr 12, 2024, 5:22 PM IST

Updated : Apr 12, 2024, 6:06 PM IST

ಯತ್ನಾಳ್‌

ಚಿಕ್ಕೋಡಿ(ಬೆಳಗಾವಿ): ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದು ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದರು. ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ್ ಜೊಲ್ಲೆ ಪರವಾಗಿ ಮತಯಾಚಿಸಿದ ಬಳಿಕ ಅಥಣಿಯಲ್ಲಿ ಇಂದು ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು.

ಯಾರ ಕಾಲಿಗೂ ನಮಸ್ಕರಿಸಬೇಡಿ, ಸ್ವಾವಲಂಬಿಗಳಾಗಿ: ಸತೀಶ್​ ಜಾರಕಿಹೊಳಿ ಅವರ ಕಾಲಿಗೆ ನಮಸ್ಕರಿಸಿ, ಸಾಹುಕಾರ್ ಸಾಹುಕಾರ್ ಅಂತ ಯಾಕೆ ಅನ್ನುತ್ತೀರಿ?. ಅವರ ಮನೆಯ ತೊಟ್ಟಿಲಿನಲ್ಲಿರುವ ಕಂದಮ್ಮಗಳಿಗೂ ನಮಸ್ಕರಿಸುತ್ತೀರಿ. ಯಾಕೆ ನಿಮಗೆ ಸ್ವಾಭಿಮಾನ ಇಲ್ಲವೇ?. ನಿಮ್ಮ ಜಮೀನಿನಲ್ಲಿ ಕಬ್ಬು ಬೆಳಯುತ್ತೀರಾ ಅಥವಾ ಅವರ ಜಮೀನಿನಲ್ಲಿ ಬೆಳೆಯುತ್ತೀರಾ? ಯಾರಿಗೂ ನಮಸ್ಕರಿಸಬೇಡಿ, ಸ್ವಾವಲಂಬಿಗಳಾಗಿ. ಮಹಾನ್​ ವ್ಯಕ್ತಿ ಪ್ರಧಾನಿ ನರೇಂದ್ರ ಮೋದಿಯವರೇ ಕಾಲಿಗೆ ನಮಸ್ಕಾರ ಮಾಡಿಸಿಕೊಳ್ಳುವುದಿಲ್ಲ. ಅಂದಮೇಲೆ ಇವರ ಕಾಲಿಗೇಕೆ ನಮಸ್ಕಾರ ಮಾಡುತ್ತೀರಿ? ಎಂದು ಪರೋಕ್ಷವಾಗಿ ಕೆಲವು ಬಿಜೆಪಿ ನಾಯಕರ ವಿರುದ್ಧ ಗುಡುಗಿದರು.

ಇದನ್ನೂ ಓದಿ:ಚುನಾವಣೆಗೆ ನಿಲ್ಲಲ್ಲ, ನಿಲ್ಲಲ್ಲ ಎಂದವರಿಗೆ ಕ್ಷೇತ್ರದ ಜನರಿಂದ ತಕ್ಕ ಉತ್ತರ: ಈಶ್ವರಪ್ಪ - K S Eshwarappa

Last Updated : Apr 12, 2024, 6:06 PM IST

ABOUT THE AUTHOR

...view details