ಬೆಂಗಳೂರು:ಜಾತಿ ನಿಂದನೆ ಪ್ರಕರಣದಲ್ಲಿ ಜೈಲು ಸೇರಿರುವ ಆರ್.ಆರ್. ನಗರ ಶಾಸಕ ಮುನಿರತ್ನ ಅವರಿಗೆ ಷರತ್ತುಬದ್ಧ ಜಾಮೀನು ದೊರೆತಿದೆ. ಜೀವ ಬೆದರಿಕೆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದ ಮುನಿರತ್ನಗೆ, ಎರಡನೇ ಪ್ರಕರಣವಾದ ಜಾತಿ ನಿಂದನೆ ಕೇಸ್ನಲ್ಲಿ ಜಾಮೀನು ಸಿಕ್ಕಿದೆ.
ಪ್ರಕರಣದ ಸಂಬಂಧ ಜಾಮೀನು ಆದೇಶವನ್ನು ಇಂದಿಗೆ ಕಾಯ್ದಿರಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾ.ಸಂತೋಷ್ ಗಜಾನನ ಭಟ್, ಈ ಆದೇಶ ಪ್ರಕಟಿಸಿದರು.
ನ್ಯಾಯಾಲಯದ ಷರತ್ತುಗಳೇನು?:ಶಾಸಕ ಮುನಿರತ್ನಗೆ2 ಲಕ್ಷ ರೂ. ಬಾಂಡ್, ಇಬ್ಬರ ಶ್ಯೂರಿಟಿ, ಸಾಕ್ಷ್ಯಾಧಾರ ನಾಶಪಡಿಸಬಾರದು ಹಾಗೂ ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು ಎಂದು ಷರತ್ತು ವಿಧಿಸಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಷರತ್ತುಗಳನ್ನು ಪೂರೈಸಲು ಇಂದು ನ್ಯಾಯಾಲಯದ ಕಲಾಪ ಅಂತ್ಯವಾದ ಕಾರಣ ನಾಳೆ ಕೋರ್ಟ್ಗೆ ಸಲ್ಲಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮುನಿರತ್ನ ಬಹುತೇಕ ನಾಳೆ ಜೈಲಿನಿಂದ ಬಿಡುಗಡೆಯಾಗಬಹುದು ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ಶಾಸಕ ಯತ್ನಾಳ್ ವಿರುದ್ಧದ ಮಾನಹಾನಿ ಪ್ರಕರಣಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಣೆ - DEFAMATION CATION