ರಾಮನಗರ: ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಷರತ್ತುಬದ್ಧ ಜಾಮೀನು ಪಡೆದು ಜೈಲಿನಿಂದ ಹೊರಬಂದ ಬೆನ್ನಲ್ಲೇ ಆರ್.ಆರ್.ನಗರ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಮತ್ತೆ ಪೊಲೀಸರು ಬಂಧನ ಮಾಡಿದ್ದಾರೆ.
ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪ ಪ್ರಕರಣದಲ್ಲಿ ಕಗ್ಗಲೀಪುರ ಪೊಲೀಸರು ಇಂದು ಬೆಳಗ್ಗೆ ಜೈಲಿನ ಬಳಿಯೇ ಅವರನ್ನು ಬಂಧಿಸಿದ್ದಾರೆ.
2020ರಿಂದ 2022ರವರೆಗೆ ಮುನಿರತ್ನ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಮತ್ತು ಬ್ಲ್ಯಾಕ್ಮೇಲ್ ಮಾಡಿದ್ದಾರೆ ಎಂದು ಮಹಿಳೆ ದೂರು ದಾಖಲಿಸಿದ್ದಾರೆ. ಈ ದೂರಿನ ಆಧಾರದ ಮೇಲೆ ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆಯಲ್ಲಿ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈಗಾಗಲೇ ಸಂತ್ರಸ್ತೆಯನ್ನು ಕರೆದೊಯ್ದು ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ.
ಇದನ್ನೂ ಓದಿ:ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಆರೋಪ: ಶಾಸಕ ಮುನಿರತ್ನ ಬಂಧನ - BJP MLA Muniratna