ಮಂಗಳೂರು:ರಾಜ್ಯದಲ್ಲಿ ಐದೂವರೆ ಮುಖ್ಯಮಂತ್ರಿಗಳು ಆಡಳಿತ ನಡೆಸುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯವಾಡಿದ್ದಾರೆ. ಮಂಗಳೂರಿನಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಡಿ.ಕೆ. ಶಿವಕುಮಾರ್, ಡಾ. ಜಿ ಪರಮೇಶ್ವರ, ಪ್ರಿಯಾಂಕಾ ಖರ್ಗೆ, ಡಾ ಯತೀಂದ್ರ ಮತ್ತು ಸುರ್ಜೆವಾಲಾ ಮುಖ್ಯಮಂತ್ರಿಗಳಾಗಿದ್ದಾರೆ. ಉಳಿದ ಅರ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಂದು ಹೇಳಿದರು.
ರಾಜ್ಯದಲ್ಲಿ ಸಿದ್ದರಾಮಯ್ಯ ಅವರದ್ದು ಏನು ನಡೆಯುತ್ತಿಲ್ಲ. ಇನ್ನುಳಿದ ಐವರು ರಾಜ್ಯದ ಮುಖ್ಯಮಂತ್ರಿಗಳಂತೆ ಆಡಳಿತ ನಡೆಸುತ್ತಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಪೂರ್ಣವಾಗಿ ಜಾರಿಯಾಗಿಲ್ಲ. 200 ಯುನಿಟ್ ವಿದ್ಯುತ್ ನೀಡಲಾಗುತ್ತಿಲ್ಲ. ಮತ್ತೊಂದೆಡೆ ವಿದ್ಯುತ್ ದರ ಜಾಸ್ತಿ ಮಾಡಲಾಗಿದೆ. ಅನ್ನಭಾಗ್ಯ ಯೋಜನೆಯಲ್ಲಿ ಕೇಂದ್ರ ಸರ್ಕಾರ ನೀಡಿದ 5 ಕೆ.ಜಿ ಅಕ್ಕಿಯನ್ನು ಮಾತ್ರ ನೀಡಲಾಗಿದೆ ಎಂದರು.