ಶಿವಮೊಗ್ಗ:ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಶಿವಮೊಗ್ಗ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ಸಾಗರದ ಅರುಣ್ ಕುಗ್ವೆ ಅವರನ್ನು ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಅರುಣ್ ಕುಗ್ವೆ ಸಾಗರದ ನಿವಾಸಿಯಾಗಿದ್ದಾರೆ.
ಅರುಣ್ ಕುಗ್ವೆ ಅವರು ನನ್ನನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿದ್ದರು. ಅಲ್ಲದೆ ಲೈಂಗಿಕವಾಗಿ ಬಳಸಿಕೊಂಡಿದ್ದರು. ಆದರೆ ಕಳೆದ ಎರಡು ತಿಂಗಳ ಹಿಂದೆ ಅರುಣ್ ತನ್ನನ್ನು ಬಿಟ್ಟು ಬೇರೆ ಯುವತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದರಿಂದ ತನಗೆ ಮೋಸ ಆಗಿದೆ ಎಂದು ಸಂತ್ರಸ್ತೆ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.