ಹೊಸ ವರ್ಷಾಚರಣೆ: ಡಿ.31ರಿಂದ ಜ.1ರ ನಸುಕಿನ 2 ಗಂಟೆಯವರೆಗೆ ಬಿಎಂಟಿಸಿ ಬಸ್ ಸೇವೆ - BMTC BUS SERVICE
ಹೊಸ ವರ್ಷಾಚರಣೆಯಲ್ಲಿ ಭಾಗವಹಿಸುವ ಸಾವರ್ಜನಿಕರ ಅನುಕೂಲಕ್ಕಾಗಿ ಡಿ.31ರ ರಾತ್ರಿ 11 ಗಂಟೆಯಿಂದ ಜ.1ರ ನಸುಕಿನ 2 ಗಂಟೆಯವರೆಗೆ ಎಂ.ಜಿ.ರಸ್ತೆಯಿಂದ ನಗರದ ವಿವಿಧ ಭಾಗಗಳಿಗೆ ಹೆಚ್ಚಿನ ಸಾರಿಗೆ ಸೌಲಭ್ಯ ಒದಗಿಸಲು ಬಿಎಂಟಿಸಿ ಮುಂದಾಗಿದೆ.
ಬೆಂಗಳೂರು: ಬಿಎಂಟಿಸಿ ಡಿ.31ರಂದು ಹೊಸ ವರ್ಷಾಚರಣೆಯಲ್ಲಿ ಭಾಗವಹಿಸುವರ ಅನುಕೂಲಕ್ಕಾಗಿ ಎಂ.ಜಿ ರೋಡ್‌ನಿಂದ ನಗರದ ವಿವಿಧ ಭಾಗಗಳಿಗೆ ರಾತ್ರಿ 11 ರಿಂದ ಜ.1ರ ನಸುಕಿನ 2 ಗಂಟೆಯವರೆಗೆ ಹೆಚ್ಚುವರಿ ಬಸ್ ಸೌಲಭ್ಯವನ್ನು ನೀಡಲು ಮುಂದಾಗಿದೆ.
ಜನದಟ್ಟಣೆ ಇರುವ ಪ್ರಮುಖ ಬಸ್ ನಿಲ್ದಾಣ ಮತ್ತು ಜಂಕ್ಷನ್ಗಳಾದ ಕೆಂಪೇಗೌಡ ಬಸ್ ನಿಲ್ದಾಣ, ಕೆ.ಆರ್. ಮಾರುಕಟ್ಟೆ, ಶಿವಾಜಿನಗರ, ಕೋರಮಂಗಲ, ಕಾಡುಗೋಡಿ, ಕೆಂಗೇರಿ, ಸುಮನಹಳ್ಳಿ, ಗೊರಗುಂಟೆಪಾಳ್ಯ, ಯಶವಂತಪುರ, ಯಲಹಂಕ, ಶಾಂತಿನಗರ, ಬನಶಂಕರಿ, ಹೆಬ್ಬಾಳ ಮತ್ತು ಸೆಂಟ್ರಲ್ ಸಿಲ್ಕ್ ಬೋರ್ಡ್ಗಳಿಂದ ಪ್ರಯಾಣಿಕರ ದಟ್ಟಣೆ, ಬೇಡಿಕೆಗನುಗುಣವಾಗಿ ಸಾರಿಗೆ ಸೌಲಭ್ಯವನ್ನು ಕಲ್ಪಿಸಲು ಕ್ರಮ ಕೈಗೊಂಡಿದೆ.