ಕರ್ನಾಟಕ

karnataka

ETV Bharat / state

ಇನ್ಮುಂದೆ ಮೊಬೈಲ್ ಆ್ಯಪ್‌ನಲ್ಲೇ ಬಿಎಂಟಿಸಿ ಬಸ್​ ಪಾಸ್​ ಲಭ್ಯ!: ನೀವು ಪಡೆಯುವುದು ಹೇಗೆ? - BMTC Digital Pass

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಪ್ರಯಾಣಿಕರ ಅನುಕೂಲಕ್ಕಾಗಿ ಡಿಜಿಟಲ್ ಪಾಸ್ ಜಾರಿಗೆ ನಿರ್ಧರಿಸಿದೆ. ನಿಮ್ಮ ಮೊಬೈಲ್ ಆ್ಯಪ್‌ನಲ್ಲೇ ಬಸ್‌ ಪಾಸ್ ಲಭ್ಯವಾಗಲಿದೆ. ಅದಕ್ಕಾಗಿ ಯಾವ ಆ್ಯಪ್‌ ಡೌನ್​ಲೋಡ್ ಮಾಡಿಕೊಳ್ಳಬೇಕು? ಪಾಸ್​ ಹೇಗೆ ಸಿಗಲಿದೆ ಎಂಬ ಮಾಹಿತಿ ಇಲ್ಲಿದೆ.

bmtc
ಬಿಎಂಟಿಸಿ ಡಿಜಿಟಲ್ ಪಾಸ್ (BMTC)

By ETV Bharat Karnataka Team

Published : Aug 31, 2024, 9:22 AM IST

Updated : Aug 31, 2024, 9:41 AM IST

ಬಿಎಂಟಿಸಿ ಡಿಜಿಟಲ್ ಪಾಸ್ (BMTC)

ಬೆಂಗಳೂರು:ಬಿಎಂಟಿಸಿ ಪ್ರಯಾಣಿಕರ ಅನುಕೂಲಕ್ಕಾಗಿ ದೈನಿಕ, ಸಾಪ್ತಾಹಿಕ ಹಾಗೂ ಮಾಸಿಕ ಪಾಸ್​​ಗಳನ್ನು ಪೂರ್ವ ಮುದ್ರಿತ ಮತ್ತು ಡಿಜಿಟಲ್ ಮಾದರಿಯಲ್ಲಿ ವಿತರಣೆ ಮಾಡಲು ಮುಂದಾಗಿದೆ. ಇನ್ನು ಮುಂದೆ ಪ್ರಯಾಣಿಕರು ಪಾಸ್‌ಗಾಗಿ ಸರತಿ ಸಾಲಿನಲ್ಲಿ ನಿಲ್ಲುವ ಅಗತ್ಯವಿಲ್ಲ.

ಬಿಎಂಟಿಸಿ ಪ್ರಯಾಣಿಕರ ಅನುಕೂಲಕ್ಕಾಗಿ ದೈನಿಕ, ಸಾಪ್ತಾಹಿಕ ಹಾಗೂ ಮಾಸಿಕ ಪಾಸ್​​ಗಳನ್ನು ನಗದು ರಹಿತ, ಕಾಗದ ರಹಿತ ಮತ್ತು ಸಂಪರ್ಕ ರಹಿತವಾಗಿ ಪಡೆಯುವ ಸಲುವಾಗಿ ಮೊಬೈಲ್ ಆ್ಯಪ್ ಮೂಲಕ ವಿತರಿಸಲಾಗುವುದು. ಸೆಪ್ಟೆಂಬರ್ 15ರಿಂದ ಅನ್ವಯವಾಗುವಂತೆ ಡಿಜಿಟಲ್ ವ್ಯವಸ್ಥೆ ಆರಂಭ ಮಾಡಲಾಗುತ್ತಿದೆ.

ಪ್ರಯಾಣಿಕರು ಟುಮ್ಯಾಕ್ ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಂಡು ನೋಂದಣಿ ಮಾಡಿಕೊಳ್ಳಬೇಕಿದೆ. ದೈನಿಕ, ಸಾಪ್ತಾಹಿಕ, ಮಾಸಿಕ ಪಾಸ್​ ಅನ್ನು ಆಯ್ಕೆ ಮಾಡಿಕೊಂಡು ವಿವರಗಳನ್ನು ಭರ್ತಿ ಮಾಡಿ, ಭಾವಚಿತ್ರವನ್ನು ಅಪ್​ಲೋಡ್ ಮಾಡಬೇಕಿದೆ.

ಪಾಸ್​​ ಪಡೆಯಲು ದೃಢೀಕರಿಸಿ, ಪಾಸ್​ನ ಮೊತ್ತವನ್ನು ಪಾವತಿಸಿದ ನಂತರ ಅದು ಲಭ್ಯವಾಗಲಿದೆ. ಡಿಜಿಟಲ್ ಪಾಸ್​​ನೊಂದಿಗೆ ಆಯ್ಕೆ ಮಾಡಿದ ಗುರುತಿನ ಚೀಟಿಯನ್ನು ಇಟ್ಟುಕೊಂಡು ಪ್ರಯಾಣಿಸುವುದು ಕಡ್ಡಾಯವಾಗಿದೆ. ಹಾಗೂ ವಾಹನಗಳಲ್ಲಿ ಅಂಟಿಸಿರುವ ಕ್ಯೂ ಆರ್ ಕೋಡ್‌ ಅನ್ನು ಮೊಬೈಲ್ ಮೂಲಕ ಸ್ಕ್ಯಾನ್ ಮಾಡಿ, ಪಾಸ್​​ನ ಮಾನ್ಯತೆಯನ್ನು ಚಾಲನಾ ಸಿಬ್ಬಂದಿಗೆ ತೋರಿಸಬೇಕು ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:ಮೆಟ್ರೋ ಪ್ರಯಾಣಿಕರೇ ಗಮನಿಸಿ: ಸೆಪ್ಟೆಂಬರ್​ನಲ್ಲಿ 2 ದಿನ ಪೀಣ್ಯದಿಂದ ನಾಗಸಂದ್ರದವರೆಗೆ ಮೆಟ್ರೋ ಸೇವೆ ಬಂದ್ - Namma Metro

Last Updated : Aug 31, 2024, 9:41 AM IST

ABOUT THE AUTHOR

...view details