ಬೆಂಗಳೂರು: ಭೂ ಕಬಳಿಕೆ ಆರೋಪದಡಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗು ಅವರ ಪತಿ ವಿರುದ್ಧ ಬಾಲಿವುಡ್ ಗಾಯಕ ಲಕ್ಕಿ ಅಲಿ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ.
ಯಲಹಂಕ ನ್ಯೂಟೌನ್ ಕೆಂಚೇನಹಳ್ಳಿ ಬಳಿ ಇರುವ ತಮ್ಮ ಜಮೀನು ಕಬಳಿಸಲು ರೋಹಿಣಿ ಸಿಂಧೂರಿ ಹಾಗು ಪತಿ ಸುಧೀರ್ ರೆಡ್ಡಿ ಸೇರಿದಂತೆ ಯಲಹಂಕ ಉಪವಿಭಾಗದ ಎಸಿಪಿ ಮಂಜುನಾಥ್, ಸರ್ವೇಯರ್ ಅಧಿಕಾರಿ ಮನೋಹರ್ ಸೇರಿದಂತೆ 6 ಮಂದಿ ಯತ್ನಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ದೂರಿನ ಪ್ರತಿಯನ್ನು ಸಾಮಾಜಿಕ ಜಾಲತಾಣ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ.