ಬೆಂಗಳೂರು:ಗಣರಾಜೋತ್ಸವದ ಸಂದರ್ಭದಲ್ಲಿ ನಗರದ ವಿವಿಧೆಡೆ ಬಾಂಬ್ ಸ್ಫೋಟವಾಗಲಿದೆ ಎಂದು ಬೆಂಗಳೂರು ಪೊಲೀಸ್ ಕಂಟ್ರೋಲ್ ರೂಮ್‌ಗೆ ಕರೆ ಮಾಡಿದ್ದ ಅಪರಿಚಿತ ವ್ಯಕ್ತಿಯ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜನವರಿ 9ರಂದು ಸಂಜೆ 5:30ರ ಸುಮಾರಿಗೆ ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿರುವ ಕಂಟ್ರೊಲ್ ರೂಮ್‌ಗೆ ಕರೆ ಮಾಡಿದ್ದ ಅಪರಿಚಿತ, ''ಆರು ಜನರ ಹೆಸರು ಹಾಗೂ ವಿಳಾಸಗಳನ್ನು ತಿಳಿಸಿ ರಾಮೇಶ್ವರಂ ಕೆಫೆಯಲ್ಲಿ ಈ ಹಿಂದೆ ಬಾಂಬ್ ಸ್ಫೋಟವಾದಂತೆ ಆರು ಜನರು ಗಣರಾಜ್ಯೋತ್ಸವದ ದಿನ ನಗರದ ವಿವಿಧೆಡೆ ಬಾಂಬ್ ಸ್ಫೋಟಿಸಲು ಉದ್ದೇಶಿಸಿದ್ದಾರೆ" ಎಂದು ಹೇಳಿದ್ದಾನೆ.