ಕರ್ನಾಟಕ

karnataka

ETV Bharat / state

ಬೆಂಗಳೂರು: ಪ್ರತಿಷ್ಠಿತ ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆಯ ಇ-ಮೇಲ್, ಪೊಲೀಸರಿಂದ ತಪಾಸಣೆ - bomb threat

ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆಯ ಇ-ಮೇಲ್​ ಬಂದಿದ್ದು, ಎಚ್ಚೆತ್ತ ಪೊಲೀಸರು ಕೂಡಲೇ ಆಸ್ಪತ್ರೆಗಳಿಗೆ ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ.

ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್
ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್arat (ETV Bharat)

By ETV Bharat Karnataka Team

Published : May 12, 2024, 10:34 PM IST

ಬೆಂಗಳೂರು: ರಾಜಧಾನಿ ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗಳಿಗೆ ಕಿಡಿಗೇಡಿಗಳು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ನಗರ ಪೊಲೀಸ್ ಇಲಾಖೆಯ ವಿಶೇಷ ಘಟಕ(ಸ್ಪೆಷಲ್ ಬ್ರ್ಯಾಂಚ್)ದ ಇ-ಮೇಲ್ ವಿಳಾಸಕ್ಕೆ ಬೆದರಿಕೆ ಕರೆ ಬಂದಿದ್ದು, ಈ ಬಗ್ಗೆ ಎಚ್ಚೆತ್ತ ಪೊಲೀಸರು ಕೂಡಲೇ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಆದರೆ, ಯಾವುದೇ ರೀತಿಯ ಸ್ಫೋಟಕ ವಸ್ತುಗಳಾಗಲಿ, ಬಾಂಬ್ ಆಗಲಿ ಪತ್ತೆಯಾಗಿಲ್ಲ. ಇದೊಂದು ಹುಸಿ ಬಾಂಬ್ ಬೆದರಿಕೆ ಎಂಬುದು ಪೊಲೀಸರಿಗೆ ಗೊತ್ತಾಗಿದೆ.

ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ ವಿಶೇಷ ಘಟಕದ ಇ-ಮೇಲ್ ಖಾತೆಗೆ ಬಂದಿರುವ ಇ-ಮೇಲ್​ನಲ್ಲಿ ನಗರದ ಸೈಂಟ್ ಫಿಲೋಮಿನಾ, ಸೈಂಟ್ ಮಾರ್ಥಾಸ್, ಜೆಎಂಜೆ, ಆಸ್ಪತ್ರೆ ಸೇರಿದಂತೆ ಆರೇಳು ಆಸ್ಪತ್ರೆಗಳಲ್ಲಿ ಈಗಾಗಲೇ ಇಡಲಾಗಿರುವ ಬಾಂಬ್​ ಕೆಲವೇ ಕ್ಷಣಗಳಲ್ಲಿ ಸ್ಫೋಟಗೊಳ್ಳಲಿದೆ ಎಂದಿದ್ದಾರೆ. ತಕ್ಷಣ ಎಚ್ಚೆತ್ತ ಪೊಲೀಸರು ಕೂಡಲೇ ಶ್ವಾನದಳ, ಬಾಂಬ್ ನಿಷ್ಕ್ರಿಯ ದಳದೊಂದಿಗೆ ಸ್ಥಳಕ್ಕೆ ಧಾವಿಸಿ ಎಲ್ಲೆಡೆ ತಪಾಸಣೆ ನಡೆಸಿದ್ದಾರೆ. ಆದರೆ, ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ. ಈ ಸಂಬಂಧ ಇದುವರೆಗೂ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ, ನಗರ ಪೊಲೀಸ್ ಘಟಕದ ವಿಶೇಷ ಘಟಕ (ಎಸ್‌ಬಿ)ದ ಇ-ಮೇಲ್ ವಿಳಾಸಕ್ಕೆ ನಗರದ ಕೆಲ ಆಸ್ಪತ್ರೆಗಳಲ್ಲಿ ಬಾಂಬ್ ಇಡಲಾಗಿದೆ ಎಂಬ ಸಂದೇಶ ಬಂದಿತ್ತು. ಕೂಡಲೇ ಎಲ್ಲಾ ಆಸ್ಪತ್ರೆಗಳಲ್ಲಿ ತಪಾಸಣೆ ನಡೆಸಲಾಗಿದ್ದು, ಇದೊಂದು ಹುಸಿ ಬಾಂಬ್ ಸಂದೇಶ ಎಂಬುದು ಪತ್ತೆಯಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:ಬೆಂಗಳೂರು: ಡ್ರೈವಿಂಗ್​ ತಿಳಿಯದ ಯುವಕ ಎಕ್ಸ್​ಲೆಟರ್​ ತುಳಿದ: ಕಾರು ಹರಿದು 5 ವರ್ಷದ ಬಾಲಕ ಸಾವು - car accident

ABOUT THE AUTHOR

...view details