ಕರ್ನಾಟಕ

karnataka

ETV Bharat / state

ನೇಹಾ ಹಿರೇಮಠ ಕೊಲೆ ಪ್ರಕರಣ ಸಿಬಿಐಗೆ ಹಸ್ತಾಂತರಿಸಿ: ಬಸವರಾಜ ಬೊಮ್ಮಾಯಿ - Basavaraja Bommai - BASAVARAJA BOMMAI

ನೇಹಾ ಹಿರೇಮಠ ‌ಕೊಲೆ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಿ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

ನೇಹಾ ಹಿರೇಮಠ ಕೊಲೆ ಪ್ರಕರಣ ಸಿಬಿಐಗೆ ಹಸ್ತಾಂತರಿಸಿ
ನೇಹಾ ಹಿರೇಮಠ ಕೊಲೆ ಪ್ರಕರಣ ಸಿಬಿಐಗೆ ಹಸ್ತಾಂತರಿಸಿ

By ETV Bharat Karnataka Team

Published : Apr 23, 2024, 1:10 PM IST

ಹುಬ್ಬಳ್ಳಿ:ರಾಜ್ಯ ಪೊಲೀಸರ ಮೇಲೆ ರಾಜಕೀಯ ಪ್ರಭಾವ ಹೆಚ್ಚಾಗುತ್ತಿದ್ದು, ಪೊಲೀಸರು ಅಸಹಾಯಕರಾಗುತ್ತಿದ್ದಾರೆ. ಹೀಗಾಗಿ ನೇಹಾ ಹಿರೇಮಠ ‌ಕೊಲೆ ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

ಇಂದು ಹನುಮ ಜಯಂತಿ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಅಶೋಕ‌ನಗರದ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನೇಹಾ ತಂದೆ ನಿರಂಜನ‌ಯ್ಯ ಹಿರೇಮಠ ಅವರು ರಾಜ್ಯ ಸರ್ಕಾರದ ಪೊಲೀಸರ ಮೇಲೆ ನಂಬಿಕೆ ಇಲ್ಲ ಎಂದಿದ್ದಾರೆ. ಹೀಗಾಗಿ ಪ್ರಕರಣ ಸಿಬಿಐಗೆ ಹಸ್ತಾಂತರ ಮಾಡಬೇಕು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇಲ್ಲವೇ ಇಲ್ಲ. ಪೊಲೀಸ್ ಠಾಣೆಗಳು ಸೆಟ್ಲಮೆಂಟ್ ಸೆಂಟರ್ ಆಗಿವೆ. ರಾಜಕಾರಣಿಗಳು ಪೊಲೀಸರ ಮೇಲೆ ಪ್ರಭಾವ ಬೀರುತ್ತಿದ್ದಾರೆ. ಪೊಲೀಸರು ಅಸಹಾಯಕರಾಗುತ್ತಿದ್ದಾರೆ ಎಂದು ಆರೋಪಿಸಿದರು.

ಬಳಿಕ ಸಚಿವ ಸಂತೋಷ ಲಾಡ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ನೇಹಾ ಹಿರಮೇಠ ಅವರನ್ನು ಒಂದು ಜಾತಿಗೆ ಸಿಮೀತ, ಮಾಡಬೇಡಿ. ಕಾಂಗ್ರೆಸ್ ಪಾಲಿಕೆ ಸದಸ್ಯರಿಗೆ ರಕ್ಷಣೆ ಕೊಡಲು ಆಗಿಲ್ಲ. ಬೆಳೆದು ಬಾಳಬೇಕಾದ ಯುವತಿಯನ್ನು ಹಾಡ ಹಗಲೇ ಕೊಲೆ ಮಾಡಲಾಗಿದೆ. ಕಾಂಗ್ರೆಸ್​​​ನವರು ಎಲ್ಲದರಲ್ಲೂ ರಾಜಕೀಯ ಮಾಡುತ್ತಾರೆ ಎಂದು ಆರೋಪಿಸಿದರು. ಕೆಪಿ ನಂಜುಡಿ ರಾಜೀನಾಮೆ ಕುರಿತು ಕೇಳಿದ ಪ್ರಶ್ನೆಗೆ ಅದರಿಂದ ಪರಿಣಾಮ ಬೀರುವುದಿಲ್ಲ ಅವರು ಕಾಂಗ್ರೆಸ್ ‌ನಲ್ಲಿದ್ರು ಬಿಜೆಪಿಗೆ ಬಂದಿದ್ದರು. ಹೀಗಾಗಿ ರಾಜೀನಾಮೆಯಿಂದ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಹೇಳಿದರು.

ಇದನ್ನೂ ಓದಿ:ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣ ಖಂಡಿಸಿ ಬೆಳಗಾವಿಯಲ್ಲಿ ಬೃಹತ್​​ ಪ್ರತಿಭಟನೆ: ಆರೋಪಿ ಫಯಾಜ್ ವಿರುದ್ಧ ಆಕ್ರೋಶ - NEHA MURDER CASE

ABOUT THE AUTHOR

...view details