ಬೆಂಗಳೂರು:ಬಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಗೆದ್ದಲಹಳ್ಳಿಯಲ್ಲಿ ಭಾನುವಾರ ತಡರಾತ್ರಿ ನಡೆದಿದೆ.
ಆದೀವ್ (16) ಸಾವನ್ನಪ್ಪಿದ ಬಾಲಕ. ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ಓದುತ್ತಿದ್ದ ಬಾಲಕನ ತಂದೆ ಕಂಪನಿಯೊಂದರಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 15 ವರ್ಷಗಳಿಂದಲೂ ಕುಟುಂಬವು ಗೆದ್ದಲಹಳ್ಳಿಯಲ್ಲಿ ವಾಸಿಸುತ್ತಿದೆ. ನಿನ್ನೆ ತಡರಾತ್ರಿ ಅಪಾರ್ಟ್ಮೆಂಟ್ನ ಏಳನೇ ಮಹಡಿಯಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಪೊಲೀಸರು ಪರಿಶೀಲಿಸಿದ್ದಾರೆ. ಮೃತದೇಹ ಮರಣೋತ್ತರ ಪರೀಕ್ಷೆ ನಡೆಸಿ, ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.