ಬೀದರ್: ರಸ್ತೆ ದಾಟುತ್ತಿದ್ದ ಬಾಲಕನಿಗೆ ಕಾರು ಡಿಕ್ಕಿ ಹೊಡೆದಿರುವ ಘಟನೆ ಔರಾದ್ ತಾಲೂಕು ಜಿರಗಾ ಕ್ರಾಸ್ ಬಳಿ ನಡೆದಿದೆ. ಗಂಭೀರವಾಗಿ ಗಾಯಗೊಂಡಿರುವ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕನಿಗೆ ಕಾರು ಡಿಕ್ಕಿ ಹೊಡೆದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಬೀದರ್: ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿಯಾಗಿ ಬಾಲಕನಿಗೆ ಗಂಭೀರ ಗಾಯ, ಗ್ರಾಮಸ್ಥರ ಪ್ರತಿಭಟನೆ - ROAD ACCIDENT
ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಔರಾದ್ನ ಜಿರಗಾ ಕ್ರಾಸ್ ಬಳಿ ನಡೆದಿದೆ.
![ಬೀದರ್: ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿಯಾಗಿ ಬಾಲಕನಿಗೆ ಗಂಭೀರ ಗಾಯ, ಗ್ರಾಮಸ್ಥರ ಪ್ರತಿಭಟನೆ ಗ್ರಾಮಸ್ಥರ ಪ್ರತಿಭಟನೆ](https://etvbharatimages.akamaized.net/etvbharat/prod-images/26-11-2024/1200-675-22982913-thumbnail-16x9-ck1.jpg)
ಗ್ರಾಮಸ್ಥರ ಪ್ರತಿಭಟನೆ (ETV Bharat)
Published : Nov 26, 2024, 3:12 PM IST
ಗ್ರಾಮಸ್ಥರ ಪ್ರತಿಭಟನೆ: ಈ ಹೆದ್ದಾರಿಯಲ್ಲಿ ನಿರಂತರವಾಗಿ ಅಪಘಾತಗಳು ಸಂಭವಿಸುತ್ತಿವೆ. ಆದರೂ ಅಪಘಾತಗಳನ್ನು ನಿಯಂತ್ರಿಸಲು ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು, ಸ್ಥಳೀಯರು ಒಂದು ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಸಂತಪೂರ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ:ದಾವಣಗೆರೆ: ರಾಗಿ ಬೇರ್ಪಡಿಸುವ ಯಂತ್ರ ಪಲ್ಟಿ, ಇಬ್ಬರು ಕಾರ್ಮಿಕರು ಸಾವು