ಕರ್ನಾಟಕ

karnataka

ETV Bharat / state

ಹಾವೇರಿ: ತೀವ್ರ ಜ್ವರದಿಂದ ಬಳಲುತ್ತಿದ್ದ ಬಾಲಕ ಸಾವು, ಡೆಂಗ್ಯೂ ಶಂಕೆ - Boy Succumbs to Fever

ಹಾವೇರಿಯಲ್ಲಿ ತೀವ್ರ ಜ್ವರದಿಂದ ಬಳಲುತ್ತಿದ್ದ ಬಾಲಕ ಸಾವನ್ನಪ್ಪಿದ್ದು, ಡೆಂಗ್ಯೂ ಜ್ವರದಿಂದ ಘಟನೆ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ.

ತೀವ್ರ ಜ್ವರದಿಂದ ಬಳಲುತ್ತಿದ್ದ ಬಾಲಕ ಸಾವು: ಡೆಂಗ್ಯೂ ಶಂಕೆ
ಸಾಂದರ್ಭಿಕ ಚಿತ್ರ (ETV Bharat)

By ETV Bharat Karnataka Team

Published : Jul 8, 2024, 1:14 PM IST

ಹಾವೇರಿ: ಶಂಕಿತ ಡೆಂಗ್ಯೂ ಜ್ವರಕ್ಕೆ ಬಾಲಕ ಬಲಿಯಾಗಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದಲ್ಲಿ ನಡೆದಿದೆ. 14 ವರ್ಷದ ಧನು ಹೊನ್ನಕ್ಕಳವರ್ ಸಾವನ್ನಪ್ಪಿದ್ದಾನೆ. ಕಳೆದೊಂದು ವಾರದಿಂದ ಈತ ತೀವ್ರ ಜ್ವರದಿಂದ ಬಳಲುತ್ತಿದ್ದ ಎಂದು ತಿಳಿದುಬಂದಿದೆ. ಸ್ಥಳಕ್ಕೆ ರಾಣೇಬೆನ್ನೂರು ಟಿಎಚ್​ಒ ಭೇಟಿ ನೀಡಿ ಪರಿಶೀಲನೆ‌ ನಡೆಸಿದ್ದಾರೆ.

ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿವೆ. ಜಿಲ್ಲೆಯ ರೋಗಿಗಳು ಅಕ್ಕಪಕ್ಕದ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲಾಡಳಿತ ಎಚ್ಚೆತ್ತು ಡೆಂಗ್ಯೂ ಹರಡದಂತೆ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ 159 ಹೊಸ ಡೆಂಗ್ಯೂ ಪ್ರಕರಣ:ರಾಜ್ಯದ ಹಲವೆಡೆಗಳಲ್ಲಿ 159 ಹೊಸ ಡೆಂಗ್ಯೂ ಪ್ರಕರಣಗಳು ವರದಿಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 301ಕ್ಕೆ ಏರಿಕೆಯಾಗಿದೆ. ಆರೋಗ್ಯ ಇಲಾಖೆ ವಿವಿಧ ಉಪಕ್ರಮಗಳನ್ನು ಕೈಗೊಂಡಿದ್ದರೂ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿಲ್ಲ. ಕಳೆದ ಜನವರಿಯಿಂದ ಇದುವರೆಗೂ ಡೆಂಗ್ಯೂ ಜ್ವರದಿಂದ 6 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಕಳೆದ 24 ಗಂಟೆಯಲ್ಲಿ 954 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 159 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಅತೀ ಹೆಚ್ಚು ಅಂದರೆ, 80 ಪ್ರಕರಣಗಳು ವರದಿಯಾಗಿವೆ. ಇದರಿಂದಾಗಿ ಒಟ್ಟು ಪ್ರಕರಣಗಳ ಸಂಖ್ಯೆ 1,988 ತಲುಪಿದೆ. ರಾಜ್ಯದ ಹಲವು ಕಡೆಗಳಲ್ಲಿ 159 ಹೊಸ ಡೆಂಗ್ಯೂ ಪ್ರಕರಣಗಳು ವರದಿಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 301ಕ್ಕೆ ಏರಿಕೆಯಾಗಿದೆ.

ಇದನ್ನೂ ಓದಿ:ತುಮಕೂರಿನಲ್ಲಿ 182 ಡೆಂಗ್ಯೂ ಪ್ರಕರಣ: ಮುನ್ನೆಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ಗೃಹ ಸಚಿವರ ಸೂಚನೆ - Tumkur Dengue Cases

ABOUT THE AUTHOR

...view details