ದೊಡ್ಡಬಳ್ಳಾಪುರ:ರಸ್ತೆ ಅಪಘಾತದಲ್ಲಿ ಬ್ರೈನ್ ಡೆಡ್ನಿಂದ ಮೃತಪಟ್ಟ ಯುವಕನ ಕಣ್ಣುಗಳನ್ನು ದಾನ ಮಾಡುವ ಮೂಲಕ ಪೋಷಕರು ಸಾವಿನಲ್ಲೂ ಸಾರ್ಥಕತೆ ಕಂಡಿದ್ದಾರೆ. ತಿಮ್ಮಸಂದ್ರ ಗ್ರಾಮದ ಯುವಕನ ಕಣ್ಣುಗಳು ಮತ್ತೊಬ್ಬ ವ್ಯಕ್ತಿಯ ಬಾಳಿಗೆ ಬೆಳಕು ನೀಡಿದೆ.
ಮುನೇಗೌಡ (34) ಎಂಬವರು ಆಗಸ್ಟ್ 12ರ ರಾತ್ರಿ 8 ಗಂಟೆ ಸಮಯದಲ್ಲಿ ಬೈಕ್ನಲ್ಲಿ ಮನೆಯತ್ತ ಬರುತ್ತಿದ್ದಾಗ ಅಪಘಾತಕ್ಕೀಡಾಗಿ ಗಂಭೀರವಾಗಿ ಗಾಯಗೊಂಡಿದ್ದರು. ಹೆಬ್ಬಾಳದ ಆಸ್ಟರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.