ಬೆಳಗಾವಿ: ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ ಮಾಡಿರುವ ಘಟನೆ ಬೆಳಗಾವಿ ತಾಲೂಕಿನ ಕರ್ಲೆ ಗ್ರಾಮದ ಹೊರವಲಯದಲ್ಲಿ ನಿನ್ನೆ ನಡೆದಿದೆ.
ಕರ್ಲೆ ಗ್ರಾಮದ ಮೋಹನ ತಳವಾರ(52) ಹತ್ಯೆಯಾದವರು. ಕೆಲಸದ ನಿಮಿತ್ತ ನಿನ್ನೆ ಕಿಣೆಯೆ ಗ್ರಾಮ ಪಂಚಾಯತಿಗೆ ಮೋಹನ ಹೋಗಿದ್ದರು. ಕೆಲಸ ಮುಗಿಸಿಕೊಂಡು ಮರಳಿ ಬೈಕ್ನಲ್ಲಿ ಬರುತ್ತಿದ್ದಾಗ ಬೈಕ್ ಅಡ್ಡಗಟ್ಟಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಮೋಹನ್ನನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ರಕ್ತಸ್ರಾವದಿಂದ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೋಹನ ಅವರು ಕೊನೆಯುಸಿರೆಳೆದಿದ್ದಾರೆ.