ದೇವನಹಳ್ಳಿ : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಾಮಕೃಷ್ಣಪ್ಪ(45) ಹತ್ಯೆಯಾದ ವ್ಯಕ್ತಿ. ರಮೇಶ್ ಹತ್ಯೆ ಮಾಡಿದ ಆರೋಪಿಯಾಗಿದ್ದು, ಆತನನ್ನು ವಶಕ್ಕೆ ಪಡೆದಿರುವ ಸಿಐಎಸ್ಎಫ್ ಸಿಬ್ಬಂದಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವ್ಯಕ್ತಿಯ ಬರ್ಬರ ಕೊಲೆ - Murder In Airport - MURDER IN AIRPORT
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬನ ಬರ್ಬರ ಕೊಲೆಯಾಗಿದೆ. ಬುಧವಾರ ಸಂಜೆ ಈ ಘಟನೆ ನಡೆದಿದ್ದು, ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಬೆಚ್ಚಿಬೀಳಿಸಿದೆ.
Published : Aug 28, 2024, 11:06 PM IST
ವಿಮಾನ ನಿಲ್ದಾಣದ ಟರ್ಮಿನಲ್ 1ರ ಬಳಿ ಬುಧವಾರ ಸಂಜೆ 6:30ರ ಸಮಯದಲ್ಲಿ ಈ ಘಟನೆ ನಡೆದಿದೆ. ದೇವನಹಳ್ಳಿಯ ಶೆಟ್ಟಿಗೆರೆ ಬಳಿ ಹೆಂಡತಿ ಮಕ್ಕಳ ಜೊತೆ ವಾಸವಾಗಿದ್ದ ರಾಮಕೃಷ್ಣಪ್ಪ, ವಿಮಾನ ನಿಲ್ದಾಣದ ಟರ್ಮಿನಲ್ ಒಂದರಲ್ಲಿ ಟ್ರಾಲಿ ಎಳೆಯುವ ಕೆಲಸ ಮಾಡುತ್ತಿದ್ದ. ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರಬಹುದೆಂದು ಹೇಳಲಾಗುತ್ತಿದೆಯಾದರೂ ನಿಖರ ಕಾರಣ ತಿಳಿದು ಬಂದಿಲ್ಲ. ಕೊಲೆ ನಿಲ್ದಾಣದಲ್ಲಿ ಕೆಲ ಹೊತ್ತು ಆತಂಕ ಸೃಷ್ಟಿಸಿತ್ತು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರು, ಆರೋಪಿಯನ್ನು ವಶಕ್ಕೆ ಪಡೆದ್ದಾರೆ. ಈ ಬಗ್ಗೆ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಬೆಂಗಳೂರು: ಪತ್ನಿ ಕೊಲೆ ಮಾಡಿ ಪೊಲೀಸರಿಗೆ ದೂರು ನೀಡಿದ್ದ ಆರೋಪಿ ಪತಿ ಬಂಧನ - Husband Kills Wife