ಕರ್ನಾಟಕ

karnataka

ETV Bharat / state

ಬಿಜೆಪಿಯಲ್ಲಿ ಯಾವುದೇ ಭಿನ್ನಮತವಿಲ್ಲ: ಅಸಮಾಧಾನ ಎರಡ್ಮೂರು ದಿನಗಳಲ್ಲಿ ಶಮನವಾಗುತ್ತದೆ; ಬಿಎಸ್​ವೈ - There is no discontent in BJP

ಲೋಕಸಭೆ ಚುನಾವಣೆ ಟಿಕೆಟ್​ ವಂಚಿತರ ಅಸಮಾಧಾನ ಎರಡ್ಮೂರು ದಿನಗಳಲ್ಲಿ ಶಮನವಾಗುತ್ತದೆ ಎಂದು ಮಾಜಿ ಸಿಎಂ ಬಿ.ಎಸ್​ ಯಡಿಯೂರಪ್ಪ ತಿಳಿಸಿದರು.

Etv Bharat
Etv Bharat

By ETV Bharat Karnataka Team

Published : Mar 16, 2024, 10:39 PM IST

ಬಿಜೆಪಿಯಲ್ಲಿ ಯಾವುದೇ ಭಿನ್ನಮತವಿಲ್ಲ

ಹುಬ್ಬಳ್ಳಿ :ಬಿಜೆಪಿಯಲ್ಲಿ ಯಾವುದೇ ಭಿನ್ನಮತವಿಲ್ಲ. ಅಸಮಾಧಾನ ಎರಡು ಮೂರು ದಿನಗಳಲ್ಲಿ ಶಮನವಾಗುತ್ತದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದರು.

ನಗರದಲ್ಲಿಂದು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಈ ನಿಟ್ಟಿನಲ್ಲಿ ನಾವು ಕೂಡ ಚುನಾವಣೆ ಸಿದ್ಧತೆ ಮಾಡಿಕೊಂಡಿದ್ದೇವೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶದಲ್ಲಿ ಬಿಜೆಪಿ ನಾಲ್ಕು ನೂರಕ್ಕೂ ಹೆಚ್ಚು ಸೀಟು ಗೆಲ್ಲುವ ಭರವಸೆ ಇದೆ. ಕರ್ನಾಟಕದಲ್ಲಿ ಕನಿಷ್ಠ 25 - 26 ಲೋಕಸಭಾ ಕ್ಷೇತ್ರದ ಚುನಾವಣೆ ಗೆಲುವು ಸಾಧಿಸುವ ಮೂಲಕ ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಮೂರನೇ ಬಾರಿಗೆ ಪ್ರಧಾನ ಮಂತ್ರಿಯನ್ನಾಗಿ ಮಾಡುವುದಕ್ಕೆ ಶತಸಿದ್ಧರಾಗಿದ್ದೇವೆ ಎಂದರು.

ಇದೇ ವೇಳೆ ಬಿಜೆಪಿ ಅಸಮಾಧಾನ ಕುರಿತು ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಬಿಎಸ್​ವೈ, ಬಿಜೆಪಿಯಲ್ಲಿ ಭಿನ್ನಮತವಿಲ್ಲ. ಅಸಮಾಧಾನ ಎರಡು ಮೂರು ದಿನಗಳಲ್ಲಿ ಶಮಮಗೊಳ್ಳುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ :ಈಶ್ವರಪ್ಪ ನಿರ್ಧಾರ ಪಕ್ಷಕ್ಕೆ ಮಾರಕ ಆಗಬಾರದು: ಮಾಜಿ ಸಚಿವ ಸಿ ಟಿ ರವಿ

ABOUT THE AUTHOR

...view details