ಚಾಮರಾಜನಗರ:ಕಾರ್ಖಾನೆಯೊಂದರ ಬಸ್ ಪಲ್ಟಿಯಾಗಿ 30 ಮಂದಿ ಕಾರ್ಮಿಕರು ಗಾಯಗೊಂಡ ಘಟನೆ ಚಾಮರಾಜನಗರದ ಬದನಗುಪ್ಪೆ ಕೈಗಾರಿಕಾ ಪ್ರದೇಶದಲ್ಲಿ ಇಂದು ಮಧ್ಯಾಹ್ನ ನಡೆಯಿತು. ಕಲರ್‌ಟ್ಯೂನ್ ಎಂಬ ಕಾರ್ಖಾನೆಯಲ್ಲಿ ಕೆಲಸ ಮುಗಿಸಿ ಕಾರ್ಮಿಕರು ಮನೆಗೆ ಮರಳುತ್ತಿದ್ದಾಗ ರಸ್ತೆ ತಿರುವಿನಲ್ಲಿ ಅಪಘಾತ ಸಂಭವಿಸಿದೆ.
ಚಾಮರಾಜನಗರ: ಬಸ್ ಪಲ್ಟಿ, 30 ಮಂದಿ ಕಾರ್ಮಿಕರಿಗೆ ಗಾಯ - ಬಸ್ ಪಲ್ಟಿ
ಚಾಮರಾಜನಗರ ಜಿಲ್ಲೆಯಲ್ಲಿ ಬಸ್ ಪಲ್ಟಿಯಾಗಿ ಸುಮಾರು 30 ಮಂದಿ ಕಾರ್ಮಿಕರು ಗಾಯಗೊಂಡಿದ್ದಾರೆ.
30 ಮಂದಿ ಕಾರ್ಮಿಕರಿಗೆ ಗಾಯ
Published : Mar 1, 2024, 6:28 PM IST
ನಾಲ್ವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಐಸಿಯುಗೆ ದಾಖಲಿಸಲಾಗಿದೆ. ಚಾಮರಾಜನಗರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
ಇದನ್ನೂ ಓದಿ:ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ: ಎನ್ಐಎ, ಎಫ್ಎಸ್ಎಲ್, ಬಾಂಬ್ ನಿಷ್ಕ್ರೀಯ ದಳದಿಂದ ಪರಿಶೀಲನೆ