ಬೆಂಗಳೂರು:ಆರ್ಥಿಕ ವೃದ್ಧಿಯ ದೂರದೃಷ್ಟಿಯಿಂದಾಗಿ ವ್ಯಾಪಾರ ವಹಿವಾಟು ಮೇಲಿನ ಸಮಯ ನಿರ್ಬಂಧವನ್ನು ಸಡಿಲ ಮಾಡಲಾಗಿದೆ. ಬೆಂಗಳೂರು ಸೇರಿದಂತೆ 10 ಮಹಾನಗರ ಪಾಲಿಕೆಗಳಲ್ಲಿ ಮಧ್ಯರಾತ್ರಿ 1 ಗಂಟೆಯವರೆಗೂ ವ್ಯಾಪಾರ ವಹಿವಾಟು ನಡೆಸಬಹುದಾಗಿದೆ.
ಈ ಹಿಂದೆ ಇದ್ದ 11 ಗಂಟೆ ಮಿತಿಯನ್ನು ಈಗ ಹೆಚ್ಚಿಸಲಾಗಿದೆ. ಮಹಾನಗರ ಪಾಲಿಕೆಗಳಾದ ಮೈಸೂರು, ಹುಬ್ಬಳ್ಳಿ- ಧಾರವಾಡ, ಬೆಳಗಾವಿ, ಕಲಬುರಗಿ, ತುಮಕೂರು, ದಾವಣಗೆರೆ, ಶಿವಮೊಗ್ಗ, ಬಳ್ಳಾರಿ, ಮಂಗಳೂರು, ವಿಜಯಪುರ ಜಿಲ್ಲೆಗಳಲ್ಲಿ ಇನ್ನು ಮುಂದೆ ರಾತ್ರಿ 1 ಗಂಟೆಯವರೆಗೂ ಅಂಗಡಿ ಮುಗ್ಗಟ್ಟುಗಳು ವ್ಯಾಪಾರ ಮಾಡಲು ಅವಕಾಶ ನೀಡಲಾಗಿದೆ. ಇದರಿಂದ ಆರ್ಥಿಕ ಪ್ರಗತಿಯ ಹಿನ್ನೆಲೆ ಇದೆ ಎಂದು ಅಂದಾಜಿಸಲಾಗಿದೆ.
ನಗರಾಭಿವೃದ್ಧಿ ಇಲಾಖೆಯ ಪ್ರಮುಖಾಂಶಗಳು
- 74 ಕಿ.ಮೀ ಉದ್ದದ 8 ಲಕ್ಷಕ್ಕೂ ಹೆಚ್ಚಿನ ಜನರು ಬಳಸುವ ನಮ್ಮ ಮೆಟ್ರೋ ವ್ಯಾಪ್ತಿ ಇನ್ನಷ್ಟು ಹೆಚ್ಚಳ
- 2025ರ ಮಾರ್ಚ್ ವೇಳೆಗೆ ಹೆಚ್ಚುವರಿ 44 ಕಿ.ಮೀ ಮಾರ್ಗ ಬಜೆಟ್ನಲ್ಲಿ ಘೋಷಣೆ
- ಮೆಟ್ರೋ ಯೋಜನೆ ಹಂತ-2 ಮತ್ತು 2ಎ ಯೋಜನೆಯಡಿಯಲ್ಲಿನ ಹೊರವರ್ತುಲ ರಸ್ತೆ- ವಿಮಾನ ನಿಲ್ದಾಣ ಮಾರ್ಗ 2026ರ ಜೂನ್ ವೇಳೆಗೆ ಪೂರ್ಣ
- ನಮ್ಮ ಮೆಟ್ರೋ ಹಂತ-3 ರ ಅಡಿಯಲ್ಲಿ ಅಂದಾಜು 15,611 ಕೋಟಿ ರೂ. ವೆಚ್ಚಕ್ಕೆ ರಾಜ್ಯ ಸರ್ಕಾರದಿಂದ ಆಡಳಿತಾತ್ಮಕ ಅನುಮೋದನೆ
- ಮೆಟ್ರೋ ಹಂತ-3 ರ ಅಡಿಯಲ್ಲಿ ಸರ್ಜಾಪುರದ ಅಗರದಿಂದ- ಕೋರಮಂಗಲ ಡೈರಿ ವೃತ್ತ ಮತ್ತು ಮೇಖ್ರಿ ವೃತ್ತದಿಂದ- ಹೆಬ್ಬಾಳವನ್ನು ಸಂಪರ್ಕಿಸುವ ಮಾರ್ಗ ನಿರ್ಮಾಣ, ಡಿ.ಪಿ.ಆರ್. ಕರಡು ಸಿದ್ಧ- ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ
- ಬೆಂಗಳೂರು ಉಪನಗರ ರೈಲು ಯೋಜನೆಯ ಅಡಿಯಲ್ಲಿ ಬೈಯ್ಯಪ್ಪನಹಳ್ಳಿಯಿಂದ ಚಿಕ್ಕಬಾಣಾವರ ವರೆಗಿನ ಕಾರಿಡಾರ್-2 ಸಿವಿಲ್ ಕಾಮಗಾರಿಗೆ ವೇಗ, ಕಾರಿಡಾರ್-4 ಅಡಿಯಲ್ಲಿ ಹೀಲಲಿಗೆಯಿಂದ ರಾಜಾನುಕುಂಟೆ ವರೆಗಿನ 46.2 ಕಿ.ಮೀ. ಉದ್ದದ ಮಾರ್ಗ ನಿರ್ಮಾಣಕ್ಕೆ ಕಾರ್ಯಾದೇಶ
ಇದನ್ನೂ ಓದಿ:ರಾಜಸ್ವ ಹೆಚ್ಚಿಸಿಕೊಳ್ಳಲು ಮದ್ಯಪ್ರಿಯರಿಗೆ ಬಿಗ್ ಶಾಕ್ ನೀಡಿದ ರಾಜ್ಯ ಸರ್ಕಾರ