ಕರ್ನಾಟಕ

karnataka

ETV Bharat / state

ಬೆಂಗಳೂರು: ಅನುಮತಿ ಪಡೆಯದೆ 20 ಕೊಳವೆಬಾವಿ ಕೊರೆದವರ ವಿರುದ್ಧ ಕ್ರಮಕ್ಕೆ ಮುಂದಾದ ಜಲಮಂಡಳಿ - Illegal Borewells - ILLEGAL BOREWELLS

ಬೆಂಗಳೂರಿನಲ್ಲಿ ಅನುಮತಿ ಇಲ್ಲದೆ 20 ಕೊಳವೆ ಬಾವಿಗಳನ್ನು ಕೊರೆದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಇಂಜಿನಿಯರ್​ಗಳಿಗೆ BWSSB ಸೂಚಿಸಿದೆ.

BWSSB
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ

By ETV Bharat Karnataka Team

Published : Mar 27, 2024, 7:12 AM IST

Updated : Mar 27, 2024, 7:18 AM IST

ಬೆಂಗಳೂರು:ಅನುಮತಿ ಪಡೆಯದೆ ಇಪ್ಪತ್ತು ಕೊಳವೆ ಬಾವಿಗಳನ್ನು ಕೊರೆದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್‌ಎಸ್‌ಬಿ) ಎಂಜಿನಿಯರ್‌ಗಳಿಗೆ ಸೂಚನೆ ನೀಡಲಾಗಿದೆ.

ಬೋರ್‌ವೆಲ್ ಕೊರೆಯುವವರು ಮಂಡಳಿಯಿಂದ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಲಾಗಿದೆ. ಆದರೆ, ಕಟ್ಟುನಿಟ್ಟಿನ ಸೂಚನೆಗಳ ಹೊರತಾಗಿಯೂ ಕೆಲವರು ಆದೇಶ ಉಲ್ಲಂಘಿಸುತ್ತಿರುವುದು ಕಂಡುಬಂದಿದೆ.

ಪ್ರಮುಖ ಪ್ರಕರಣದಲ್ಲಿ ಸ್ಥಳೀಯ ಕಾಂಗ್ರೆಸ್​ ಮುಖಂಡ ಮನೋಜ್ ಕುಮಾರ್ ಅವರು ತಲಕಾವೇರಿ ಲೇಔಟ್‌ ವಿಭೂತಿಪುರ ಕೆರೆ ಬಳಿ ಬೋರ್‌ವೆಲ್ ಕೊರೆಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ವಿಚಾರವಾಗಿ ಸ್ಥಳಕ್ಕೆ ಭೇಟಿ ನೀಡಿದ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಸೈಯದ್ ಮುದಾಸಿರ್​ ಕಾಮಗಾರಿಯನ್ನು ಸ್ಥಗಿತಗೊಳಿಸಿದ್ದಾರೆ.

ಪ್ರಕರಣದ ಕುರಿತು ಎಂಜಿನಿಯರ್ ಸೈಯದ್ ಮುದಾಸಿರ್​ ಮಾತನಾಡಿ, "ಎಚ್‌ಎಎಲ್​ ಪೊಲೀಸ್​ ಠಾಣೆಗೆ ದೂರು ನೀಡಲಾಗಿದೆ. ಆ ಬಳಿಕ ಬೋರ್‌ವೆಲ್​ ವಾಹನ ಸಿಬ್ಬಂದಿ ಮತ್ತು ಮಾಲೀಕರು ಠಾಣೆಗೆ ಆಗಮಿಸಿ ಮಾಹಿತಿ ನೀಡಿದ್ದಾರೆ" ಎಂದು ಹೇಳಿದರು.

ಇದನ್ನೂ ಓದಿ:ಯಲಹಂಕ, ದಾಸರಹಳ್ಳಿ ವ್ಯಾಪ್ತಿಯ ನಾಗರಿಕರಿಗೆ ನೀರಿನ ಸಮಸ್ಯೆೆ ಆಗದಂತೆ ಸೂಕ್ತ ಕ್ರಮ: ತುಷಾರ್ ಗಿರಿನಾಥ್ - prevent water problems for citizens

Last Updated : Mar 27, 2024, 7:18 AM IST

ABOUT THE AUTHOR

...view details