ಶಿವಮೊಗ್ಗ:ನಮ್ಮ ತಂದೆ ಯಡಿಯೂರಪ್ಪನವರ ವಿರುದ್ದ ಕೆಳಹಂತದ ನ್ಯಾಯಾಲಯದಲ್ಲಿ ಜಾಮೀನುರಹಿತ ವಾರೆಂಟ್ ಜಾರಿಯಾಗಿದೆ ಎಂದು ಮಾಧ್ಯಮದ ಮೂಲಕ ತಿಳಿಯಿತು. ನಮಗೆ ನ್ಯಾಯಾಲಯದಲ್ಲಿ ನ್ಯಾಯ ಸಿಗುವ ವಿಶ್ವಾಸವಿದೆ ಎಂದು ಪುತ್ರ, ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
'ನ್ಯಾಯಾಲಯದಲ್ಲಿ ನ್ಯಾಯ ಸಿಗುವ ವಿಶ್ವಾಸವಿದೆ': ಯಡಿಯೂರಪ್ಪ ವಿರುದ್ಧದ ವಾರೆಂಟ್ ಬಗ್ಗೆ ಬಿ.ವೈ.ರಾಘವೇಂದ್ರ ಪ್ರತಿಕ್ರಿಯೆ - B Y Raghavendra - B Y RAGHAVENDRA
ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ದ ಜಾಮೀನುರಹಿತ ವಾರೆಂಟ್ ಜಾರಿಯಾದ ಬಗ್ಗೆ ಪುತ್ರ, ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಪ್ರತಿಕ್ರಿಯಿಸಿದ್ದಾರೆ.
ಬಿ.ವೈ.ರಾಘವೇಂದ್ರ (ETV Bharat)
Published : Jun 13, 2024, 9:37 PM IST
ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಇದು ಸುಮಾರು ಎರಡೂವರೆ ತಿಂಗಳ ಹಿಂದೆ ನೀಡಿರುವ ದೂರು. ಇದರಲ್ಲೇನೂ ಸತ್ಯಾಸತ್ಯತೆ ಇಲ್ಲ. ಬಿ-ರಿಪೋರ್ಟ್ ಹಾಕಬಹುದು. ದೂರು ನೀಡಿರುವ ಮಹಿಳೆ ಸುಮಾರು 50 ಅಧಿಕಾರಿಗಳ ಮೇಲೆ ಇದೇ ರೀತಿ ದೂರು ನೀಡಿದ್ದಾರೆ. ಗೃಹ ಸಚಿವರೇ ಮಾನಸಿಕವಾಗಿ ತೊಂದರೆಯಲ್ಲಿರುವ ಹೆಣ್ಣು ಮಗಳೆಂಬ ಅರ್ಥದಲ್ಲಿ ಮಾತನಾಡಿದ್ದರು. ನಾವೂ ಸಹ ಹಾಗೆ ಅಂದುಕೊಂಡಿದ್ದೆವು'' ಎಂದು ಹೇಳಿದರು.
ಇದನ್ನೂ ಓದಿ:ಪೋಕ್ಸೋ ಕೇಸ್: ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್