ಮಂಗಳೂರು: "ನವಯುಗ ನವಪಥದ ಆಧಾರದಲ್ಲಿ, ಹಿಂದುತ್ವದ ಬದ್ಧತೆಯಲ್ಲಿ, ಅಭಿವೃದ್ಧಿಯನ್ನು ಆದ್ಯತೆಯಾಗಿಸಿ ಜಿಲ್ಲೆಯಲ್ಲಿ ಅಭಿವೃದ್ಧಿಪಡಿಸುತ್ತೇನೆ" ಎಂದು ದ.ಕ.ಜಿಲ್ಲೆಯಲ್ಲಿ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ಬ್ರಜೇಶ್ ಚೌಟ ಹೇಳಿದರು.
ದ.ಕ.ಜಿಲ್ಲೆಯನ್ನು ನವಪಥದಲ್ಲಿ ಅಭಿವೃದ್ಧಿಯತ್ತ ಕೊಂಡೊಯ್ಯುವೆ: ಬ್ರಜೇಶ್ ಚೌಟ - Captain Brijesh Chowta - CAPTAIN BRIJESH CHOWTA
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಭಾರೀ ಅಂತರದ ಗೆಲುವು ದಾಖಲಿಸಿರುವ ಕ್ಯಾ.ಬ್ರಜೇಶ್ ಚೌಟ, ಕ್ಷೇತ್ರವನ್ನು ನವಪಥದಲ್ಲಿ ಅಭಿವೃದ್ಧಿಪಡಿಸುವ ಭರವಸೆ ನೀಡಿದ್ದಾರೆ.
Published : Jun 4, 2024, 4:11 PM IST
|Updated : Jun 4, 2024, 5:53 PM IST
ಸುರತ್ಕಲ್ನ ಮತ ಎಣಿಕಾ ಕೇಂದ್ರದಲ್ಲಿ ಇಂದು ಮಾಧ್ಯಮದೊಂದಿಗೆ ಮಾತನಾಡಿದ ಅವರು, ಇದು ಜಿಲ್ಲೆಯ ಬಿಜೆಪಿಯ ಗೆಲುವು, ಮೋದಿಯವರ, ಹಿಂದುತ್ವದ, ಸಂಘಟನೆಯ ಕಾರ್ಯಕರ್ತರ, ಜಿಲ್ಲಾಧ್ಯಕ್ಷರ ಗೆಲುವು. ಸತ್ಯ, ಧರ್ಮ, ನ್ಯಾಯ, ಹಿಂದುತ್ವದ ಆಧಾರದಲ್ಲಿ ನಾವು ಜಿಲ್ಲೆಯಲ್ಲಿ ಸ್ಪರ್ಧಿಸಿದ್ದೆವು. ತುಳುನಾಡಿನ ದೈವ, ದೇವರ ಆಶೀರ್ವಾದದ ಬಲದಿಂದ, ಕಾರ್ಯಕರ್ತರ ಪರಿಶ್ರಮ, ಸಂಘಟನೆಯ ಹಿರಿಯರ ಮಾರ್ಗದರ್ಶನದಿಂದ, ರಾಜ್ಯ ಹಾಗೂ ಕೇಂದ್ರದ ನಾಯಕರ ಬೆಂಬಲದೊಂದಿಗೆ ಈ ಚುನಾವಣೆಯನ್ನು ಯಶಸ್ವಿಯಾಗಿ ಎದುರಿಸಿದ್ದೇವೆ' ಎಂದರು.