ಹುಬ್ಬಳ್ಳಿ:ಕಾರುಟೋಲ್ ಡಿವೈಡರ್ಗೆ ಡಿಕ್ಕಿ ಹೊಡೆದು ಮೂರು ತಿಂಗಳ ಮಗು ಸಾವನ್ನಪ್ಪಿದ ಘಟನೆ ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ನಲವಡಿ ಟೋಲ್ ಬಳಿ ನಡೆದಿದೆ. ಮೃತಪಟ್ಟ ಮಗುವನ್ನು ಸಾನ್ವಿ ಎಂದು ಗುರುತಿಸಲಾಗಿದೆ.
ಹುಬ್ಬಳ್ಳಿ-ಗದಗ ರಸ್ತೆಯಲ್ಲಿರುವ ಟೋಲ್ ಬಳಿ ವೇಗವಾಗಿ ಬಂದ ಕಾರು ನಿಯಂತ್ರಣ ಕಳೆದುಕೊಂಡು ಡಿವೈಡರ್ಗೆ ಗುದ್ದಿದೆ. ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮಗು ಸಾವನ್ನಪ್ಪಿದೆ.