ಚಿಕ್ಕಮಗಳೂರು : ಚಾಲಕನ ನಿಯಂತ್ರಣ ತಪ್ಪಿ ಸುಮಾರು 20 ಅಡಿ ಪ್ರಪಾತಕ್ಕೆ ಕಾರು ಬಿದ್ದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಚಾರ್ಮಾಡಿ ಘಾಟ್ನ ಮಲಯ ಮಾರುತ ಬಳಿ ಈ ದುರಂತ ಘಟನೆ ನಡೆದಿದೆ.
ಚಿತ್ರದುರ್ಗದಿಂದ ಧರ್ಮಸ್ಥಳಕ್ಕೆ ಪ್ರವಾಸಕ್ಕೆಂದು ಹೊರಟ ಆರು ಜನ ಪ್ರವಾಸಿಗರಿದ್ದ ಕಾರೊಂದು ಚಾರ್ಮಾಡಿ ಘಾಟ್ನ ಮಲಯ ಮಾರುತ ಬಳಿ ರಸ್ತೆಗೆ ತಡೆ ಗೋಡೆ ಇಲ್ಲದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದಿದೆ. ಪರಿಣಾಮ ಕಾರು ಮಗುಚಿ ಬಿದ್ದು ಸಂಪೂರ್ಣ ಜಖಂಗೊಂಡಿದೆ. ಕಾರಿನಲಿದ್ದರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಕೂಡಲೇ ಸ್ಥಳೀಯರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.