ಚಾಮರಾಜನಗರ: ಔಡಿ ಕಾರು ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ತಪ್ಪಲಿನ ತಾಳುಬೆಟ್ಟ ಎಂಬಲ್ಲಿ ಕಳೆದ ರಾತ್ರಿ ನಡೆದಿದೆ.
ಕಾರು ಚಲಾಯಿಸುತ್ತಿದ್ದ ಹರೀಶ್ ಗೌಡ ಎಂಬವರು ಸ್ಥಳದಲ್ಲೇ ಅಸುನೀಗಿದ್ದು, ಮೈಸೂರಿನ ಪೊಲೀಸ್ ಕಾನ್ಸ್‌ಟೇಬಲ್ ವಿಜಯ್ ಕುಮಾರ್ ತೀವ್ರವಾಗಿ ಗಾಯಗೊಂಡಿದ್ದಾರೆ. ಮೈಸೂರಿನಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಇವರಿಬ್ಬರು ಬರುತ್ತಿದ್ದರು ಎಂದು ತಿಳಿದು ಬಂದಿದೆ.