ಬೆಂಗಳೂರು:ಬಿಜೆಪಿ ಕರ್ನಾಟಕದ ಅಧಿಕೃತ ಎಕ್ಸ್ ಖಾತೆಯ ಪೋಸ್ಟ್ವೊಂದರ ಸಂಬಂಧ ಎಫ್ಐಆರ್ ದಾಖಲಿಸಲಾಗಿದೆ. ಸಮುದಾಯಗಳ ನಡುವೆ ದ್ವೇಷ ಕೆರಳಿಸುವಂತಹ ಪೋಸ್ಟ್ ಪ್ರಕಟಿಸಿರುವ ಆರೋಪದ ಮೇಲೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಿಜೆಪಿಯ ಐಟಿ ಸೆಲ್ ವಿಭಾಗದ ರಾಷ್ಟ್ರೀಯ ಸಂಚಾಲಕ ಅಮಿತ್ ಮಾಳವಿಯಾ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಕೆಪಿಸಿಸಿಯ ಮಾಧ್ಯಮ ಮತ್ತು ಸಂವಹನ ವಿಭಾಗದ ಮುಖ್ಯಸ್ಥ ರಮೇಶ್ ದೂರು ನೀಡಿದ್ದಾರೆ. ಅದರ ಅನ್ವಯ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ರಾಹುಲ್ ಗಾಂಧಿ ಹಾಗೂ ಸಿದ್ದರಾಮಯ್ಯ ಅವರು ಎಸ್.ಸಿ, ಎಸ್.ಟಿ ಮತ್ತಿತರ ಹಿಂದುಳಿದ ವರ್ಗಗಳ ಹೆಸರಿನ ಮೊಟ್ಟೆಗಳಿರುವ ಗೂಡಿನಲ್ಲಿ ಮುಸ್ಲಿಂ ಹೆಸರಿನ ಮೊಟ್ಟೆಯನ್ನು ತಂದಿಟ್ಟು ಪೋಷಿಸುವಂತೆ ಹಾಗೂ ಅದೇ ಮುಸ್ಲಿಂ ಹೆಸರಿನ ಮೊಟ್ಟೆಯಿಂದ ಹೊರಬಂದ ಮರಿ ಕೊನೆಗೆ ಇತರೆ ಹಕ್ಕಿಗಳನ್ನ ಓಡಿಸುತ್ತಿರುವಂತೆ ಸೂಚಿಸುವ ಕಾರ್ಟೂನ್ ವಿಡಿಯೋವೊಂದನ್ನು ಎಚ್ಚರ..ಎಚ್ಚರ..ಎಚ್ಚರ..! ಎಂಬ ಬರಹದೊಂದಿಗೆ ಎಕ್ಸ್ ಖಾತೆಯಲ್ಲಿ ಬಿಜೆಪಿ ಹಂಚಿಕೊಂಡಿತ್ತು.
ಈ ವಿಡಿಯೋಗೆ ವಿರೋಧ ವ್ಯಕ್ತಪಡಿಸಿ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಮುಖ್ಯಸ್ಥ ರಮೇಶ್ ದೂರು ನೀಡಿದ್ದಾರೆ. ಅದರ ಅನ್ವಯ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಇದನ್ನೂ ಓದಿ:ಕಾಂಗ್ರೆಸ್ ಪ್ರಣಾಳಿಕೆ ಟೀಕಿಸಿ ಪೋಸ್ಟ್: ಬಿಜೆಪಿ ಎಕ್ಸ್ ಖಾತೆ ವಿರುದ್ಧ ಕೇಸ್ - FIR Against BJP X Account