ಕಲಬುರಗಿ:ಪಿಸ್ತೂಲ್ ಮಾದರಿಯ ಲೈಟರ್ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹರಿಬಿಡುವ ಮೂಲಕ ಸಮಾಜದಲ್ಲಿ ಅಶಾಂತಿಯ ವಾತಾವರಣ ಸೃಷ್ಠಿಸಿರುವ ಆರೋಪದ ಮೇಲೆ ಇಬ್ಬರು ಯುವಕರ ಮೇಲೆ ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೇಡಂ ಪಟ್ಟಣದ ಇಂದಿರಾನಗರದ ನಿವಾಸಿಗಳಾದ ಮಹೇಶ ಹಾಗೂ ಬಸವರಾಜ ಎಂಬ ಯುವಕರು ಪಿಸ್ತೂಲ್ ಮಾದರಿಯ ಲೈಟರ್ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಾಗೂ ವಿಡಿಯೋ ಹರಿಬಿಟ್ಟಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನು ಘಟನೆಗೆ ಸಂಬಂಧಿಸಿದಂತೆ ಇಬ್ಬರು ಯುವಕರನ್ನು ಕರೆಯಿಸಿ ವಿಚಾರಣೆ ನಡೆಸಿದ್ದು, ಅವರಿಂದ ನಕಲಿ ಪಿಸ್ತೂಲ್ ವಶಕ್ಕೆ ಪಡೆಯಲಾಗಿದೆ. ಮುಂದಿನ ದಿನಗಳಲ್ಲಿ ಈ ರೀತಿಯಾಗಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಾಗೂ ಭಾವಚಿತ್ರಗಳನ್ನು ಹರಿಬಿಡದಂತೆ ಎಚ್ಚರಿಸಿದ್ದಾರೆ.