ಕರ್ನಾಟಕ

karnataka

ಸರ್ಕಾರಿ ನೌಕರರಿಂದ ಅಭಿನಂದನೆ ಕಾರ್ಯಕ್ರಮ: ಆ.17ರಂದು ಸಾಂದರ್ಭಿಕ ರಜೆ ಮಂಜೂರು - Casual Leave Granted

By ETV Bharat Karnataka Team

Published : Aug 13, 2024, 11:02 PM IST

ರಾಜ್ಯ ಸರ್ಕಾರಿ ನೌಕರರ ಸಂಘದ ಅಭಿನಂದನೆ ಕಾರ್ಯಕ್ರಮಕ್ಕಾಗಿ ಆ.17 ರಂದು ಸಾಂದರ್ಭಿಕ ರಜೆ ಮಂಜೂರು ಮಾಡಿ ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದೆ.

vidhanasouda
ವಿಧಾನಸೌಧ (ETV Bharat)

ಬೆಂಗಳೂರು :ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಅಭಿನಂದನೆ ಕಾರ್ಯಕ್ರಮಕ್ಕಾಗಿ ಆ. 17 ರಂದು ಸಾಂದರ್ಭಿಕ ರಜೆ ಮಂಜೂರು ಮಾಡಿ ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ವೃಂದ ಸಂಘಗಳ ವತಿಯಿಂದ ಆ. 17 ರಂದು ಬೆಂಗಳೂರು ನಗರದ ಅರಮನೆ ಆವರಣದಲ್ಲಿ "ಅಭಿನಂದನೆ' ಹಾಗೂ "ಕಾರ್ಯಾಗಾರ' ಆಯೋಜಿಸಲಾಗಿದೆ.‌ ಏಳನೇ ವೇತನ ಜಾರಿ ಮಾಡಿರುವ ಹಿನ್ನೆಲೆ ಸಂಘ ಸಿಎಂ ಹಾಗೂ ಡಿಸಿಎಂಗೆ ಅಭಿನಂದನೆ ಸಲ್ಲಿಸಲಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವ ನೌಕರರಿಗೆ ಸಾಂದರ್ಭಿಕ ರಜೆ ಮಂಜೂರು ಮಾಡಲಾಗಿದೆ.

ನೌಕರರು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಬೇಕು. ಸಮ್ಮೇಳನದಲ್ಲಿ ಭಾಗವಹಿಸಿದ ಬಗ್ಗೆ ಅಧಿಕೃತ ಹಾಜರಾತಿ ಪತ್ರವನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಅಥವಾ ಇವರಿಂದ ನಾಮನಿರ್ದೇಶನ ಹೊಂದಿದ ಅಧಿಕಾರಿಗಳಿಂದ ಪಡೆದು ಒದಗಿಸಬೇಕು ಎಂದು ಸೂಚಿಸಿದೆ.

ಈ ಆಧಾರದ ಮೇಲೆ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲು ಅಧಿಕಾರಿ-ನೌಕರರು, ನಿಗಮ-ಮಂಡಳಿ, ಪ್ರಾಧಿಕಾರ ಹಾಗೂ ಇತರ ಸ್ಥಳೀಯ/ಸ್ವಾಯತ್ತ ಸಂಸ್ಥೆಗಳ ಅಧಿಕಾರಿ ನೌಕರರೂ ಅಧಿಕಾರವುಳ್ಳ, ಅಧಿಕಾರಿಗಳು ಮಂಜೂರು ಮಾಡತಕ್ಕದ್ದು ಎಂಬ ಷರತ್ತಿಗೊಳಪಟ್ಟು ಬೆಂಗಳೂರು ನಗರ ಜಿಲ್ಲೆಯ ಹಾಗೂ ರಾಜ್ಯದ ಇತರೆ ಜಿಲ್ಲೆಗಳ ಅಧಿಕಾರಿ/ನೌಕರರಿಗೆ 17.08.2024 ರಂದು ಸಾರ್ವಜನಿಕ ಕೆಲಸ ಕಾರ್ಯಗಳಿಗೆ ತೊಂದರೆಯಾಗದಂತೆ ಒಂದು ದಿನದ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿದೆ.

ಇದನ್ನೂ ಓದಿ:ರಾಜ್ಯ ಸರ್ಕಾರ ಜಾರಿ ಮಾಡಿರುವ 'ಲ್ಯಾಂಡ್ ಬೀಟ್ ಯೋಜನೆ'ಯ ಅನುಕೂಲಗಳೇನು? - Land Beat Scheme

ABOUT THE AUTHOR

...view details