ಕರ್ನಾಟಕ

karnataka

ರಾಮನಗರ: ಸಿಸಿಬಿ ಪೊಲೀಸ್ ಇನ್ಸ್​ಪೆಕ್ಟರ್ ತಿಮ್ಮೇಗೌಡ ಆತ್ಮಹತ್ಯೆ - Police Inspector suicide

By ETV Bharat Karnataka Team

Published : Aug 5, 2024, 11:27 AM IST

ಸಿಸಿಬಿಯಲ್ಲಿ ಪೊಲೀಸ್ ಇನ್ಸ್​ಪೆಕ್ಟರ್ ಆಗಿದ್ದ ತಿಮ್ಮೇಗೌಡ ಅವರು ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆಗೆ ಕಾರಣ ತಿಳಿದುಬಂದಿಲ್ಲ.

ಸಿಪಿಐ ತಿಮ್ಮೇಗೌಡ ಆತ್ಮಹತ್ಯೆ
ಸಿಪಿಐ ತಿಮ್ಮೇಗೌಡ ಆತ್ಮಹತ್ಯೆ (ETV Bharat)

ರಾಮನಗರ: ಸಿಸಿಬಿ ಪೊಲೀಸ್ ಇನ್ಸ್​ಪೆಕ್ಟರ್ ತಿಮ್ಮೇಗೌಡ ಅವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರ ಜಿಲ್ಲೆ ಕಗ್ಗಲಿಪುರ ಪೊಲೀಸ್ ಠಾಣೆ ವ್ಯಾಪ್ತಿಯ ತಗಚಕುಪ್ಪೆಯಲ್ಲಿ ನಡೆದಿದೆ.

ಬೆಂಗಳೂರು ಸಿಸಿಬಿ ಅಪರಾಧ ವಿಭಾಗದಲ್ಲಿ ಪೊಲೀಸ್ ಇನ್ಸ್​ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ತಿಮ್ಮೇಗೌಡ ಅವರು ಕುಂಬಳಗೂಡು ಬಳಿಯ ಖಾಸಗಿ ಲೇಔಟ್​​ನಲ್ಲಿರುವ ಮರವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಘಟನೆಗೆ ಕಾರಣ ತಿಳಿದುಬಂದಿಲ್ಲ.

ಮೃತರು ಈ ಹಿಂದೆ ಬಿಡದಿ, ಮೈಸೂರು ಜಿಲ್ಲೆಯ ಹಲವು ಪೊಲೀಸ್ ಠಾಣೆಗಳಲ್ಲಿ ಕಾರ್ಯನಿರ್ವಹಿಸಿದ್ದರು. ಇನ್ಸ್‌ಪೆಕ್ಟರ್ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಇವರು ಮೂಲತಃ ಚನ್ನಪಟ್ಟಣ ತಾಲೂಕಿನವರಾಗಿದ್ದಾರೆ.

ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೊಲೆ ಆರೋಪ:ಕುಟುಂಬಸ್ಥರು ಮೈಸೂರಿನಲ್ಲಿ ಇದ್ದ ಕಾರಣ ಕುಟುಂಬಸ್ಥರ ಸಮ್ಮುಖದಲ್ಲಿಯೇ ಶವವನ್ನು ತೆಗೆಯಲು ಪೊಲೀಸರು ಕಾಯುತ್ತಿದ್ದರು. ನಂತರ ಸ್ಥಳಕ್ಕೆ ಬಂದ ಕುಟುಂಬಸ್ಥರು, 'ತಿಮ್ಮೇಗೌಡ ಆತ್ಮಹತ್ಯೆ ಮಾಡಿಕೊಳ್ಳುವ ಸ್ವಭಾವದವರಲ್ಲ. ಯಾರೋ ಹೊಡೆದು ಕೊಲೆ ಮಾಡಿದ್ದಾರೆ' ಎಂದು ಶಂಕೆ ವ್ಯಕ್ತಪಡಿಸಿದರು. ಈ ಹಿನ್ನೆಲೆಯಲ್ಲಿ ಸ್ವಲ್ಪ ಸಮಯ ಪೊಲೀಸರು ಹಾಗೂ ಕುಟುಂಬದವರ ನಡುವೆ ಮಾತಿನ ಚಕಮಕಿ‌ ನಡೆಯಿತು. ಶವವನ್ನು ಆಸ್ಪತ್ರೆಗೆ ತೆಗೆದುಕೊಂಡು ಹೋಗದಂತೆ ಕೂಡ ಆಂಬ್ಯುಲೆನ್ಸ್ ತಡೆದರು.

ನಂತರ ಹಿರಿಯ ಪೊಲೀಸ್​ ಅಧಿಕಾರಿಗಳು ಮಧ್ಯ ಪ್ರವೇಶಿಸಿ, ಕುಟುಂಬಸ್ಥರ ಮನವೊಲಿಸಿ ಶವವನ್ನು ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆಗೆ ರವಾನಿಸಿದರು. ಈ ಬಗ್ಗೆ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: PSI ಪರಶುರಾಮ್ ಸಾವು ಪ್ರಕರಣ: ತನಿಖೆಗೆ ಆದೇಶ - ಗೃಹ ಸಚಿವ ಡಾ.ಜಿ.ಪರಮೇಶ್ವರ್ - PSI Death Case

ABOUT THE AUTHOR

...view details